ಶತದಿನದ ಬೆನ್ನಲ್ಲೇ ಕುಮಾರಸ್ವಾಮಿ ದೆಹಲಿ ದೌಡು- ರಾಹುಲ್ ಭೇಟಿ-ರಾಜಕೀಯ ಚರ್ಚೆ!

 

ad

ಕುಮಾರಸ್ವಾಮಿ ನೇತೃತ್ವದ ಸರ್ಕಾರ ಶತದಿನೋತ್ಸವ ಪೊರೈಸುತ್ತಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ದೆಹಲಿಗೆ ದೌಡಾಯಿಸಿದ್ದು, ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದೆಹಲಿಯ ನಿವಾಸದಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಕುಮಾರಸ್ವಾಮಿ ಸುದೀರ್ಘ ಅವಧಿಯವರೆಗೆ ಕರ್ನಾಟಕದ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದಾರೆ.

 

ಇನ್ನು ಡಿಸಿಎಂ ಡಾ.ಪರಮೇಶ್ವರ್ ಕೂಡ ರಾಹುಲ್ ಗಾಂಧಿ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಆದರೇ ಪರಮೇಶ್ವರ್ ಗೂ ಮುನ್ನವೇ ರಾಹುಲ್ ಗಾಂಧಿಯನ್ನು ಭೇಟಿಯಾದ ಕುಮಾರಸ್ವಾಮಿ ರಾಜ್ಯದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯನವರ ರಾಜಕೀಯ ಹೇಳಿಕೆಗಳು ಹಾಗೂ ಅದರಿಂದ ಉಂಟಾಗಿರುವ ಮುಜುಗರದ ವಿಚಾರವನ್ನು ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ತಾವು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿದ್ದಾರೆ. ಇದರಿಂದ ರಾಜ್ಯ ಸರ್ಕಾರದಲ್ಲಿ ಒಂದು ರೀತಿಯ ಬಿಕ್ಕಟ್ಟು ಉಂಟಾಗಿದ್ದು, ಈ ರೀತಿ ಹೇಳಿಕೆಗಳ ಮೂಲಕ ಗೊಂದಲ ಸೃಷ್ಟಿಸದಂತೆ ಸೂಚನೆ ನೀಡುವಂತೆ ಕುಮಾರಸ್ವಾಮಿ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ. ಇನ್ನು ಕುಮಾರಸ್ವಾಮಿ ಭೇಟಿ ಬಳಿಕ ಪರಮೇಶ್ವರ್ ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದು, ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಈ ದೆಹಲಿ ದೌಡು, ಸಾಕಷ್ಟು ಕುತೂಹಲ ಮೂಡಿಸಿರೋದು ನಿಜ.