ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ನಿಂದ ದೂರು..

ನಮೋ ಸುನಾಮಿ ಹಾಗೂ ಚಕ್ರವರ್ತಿ ಸೂಲಿಬೆಲೆ @ ಚಕ್ರವರ್ತಿ ಮಿತುನ್ ಫೇಸ್ ಬುಕ್ ಖಾತೆಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ನಟರಾಜಗೌಡ, ಕಾನೂನು ಘಟಕದ ಉಪಾಧ್ಯಕ್ಷ ಅಹಮದ್,ಪ್ರಧಾನ ಕಾರ್ಯದರ್ಶಿ ಮುಕುಂದರಾಜ್ ಅವರು ಆಯೋಗಕ್ಕೆ ದೂರು ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟರಾಜಗೌಡ.

 

ಚಕ್ರವರ್ತಿ ಸೂಲಿಬೆಲೆ @ ಚಕ್ರವರ್ತಿ ಮಿತುನ್, ಚುನಾವಣೆ ಆಯೋಗದ ನಿಯಮಗಳನ್ನು ಉಲ್ಲಂಘನೆ ಮಾಡಿ ಫೇಸ್ ಬುಕ್ ನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಐಟಿಸಿ ಸೆಕ್ಷನ್ ೧೮೮ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಿ ಎಂದು ಚುನಾವಣಾ ಆಯೋಗ ಕ್ಕೆ ದೂರು ನೀಡಿದ್ದೇವೆ. ನಮ್ಮ ದೂರನ್ನು ಅಯೋಗ ಸ್ವೀಕಾರ ಮಾಡಿದೆ ಎಂದ್ರು.