ಪೊಲೀಸ್ ಕರ್ತವ್ಯಕ್ಕೆ ಅಡ್ಡಿ- ಎಮ್​ಎಲ್​ಎ ವಿರುದ್ಧ ಎಫ್​ಆಯ್​ಆರ್​!

ಸ್ಥಳೀಯ ಸಂಸ್ಥೆ ಚುನಾವಣೆ ಅಖಾಡ ರಂಗೇರಿದೆ. ಮತ ಸೆಳೆಯಲು ರಾಜಕೀಯ ಸರ್ಕಸ್​ ನಡೆದಿರುವ ಬೆನ್ನಲ್ಲೇ ಜನಪ್ರತಿನಿಧಿಗಳ ವಿರುದ್ಧವೇ ಪ್ರಕರಣ ದಾಖಲಾದ ಘಟನೆ ಕೂಡ ನಡೆದಿದೆ. ಹಾಸನದಲ್ಲಿ ಇಂತಹದೊಂದು ಘಟನೆ ನಡೆದಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಾಸನ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ಹಂಚುತ್ತಿದ್ದ ಆರೋಪದ ಮೇರೆಗೆ ಕೆಲ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ತಡರಾತ್ರಿ ಪೊಲೀಸ್ ಠಾಣೆಗೆ ನುಗ್ಗಿದ ಪ್ರೀತಮ್ ಗೌಡ್ ಹಾಗೂ ಅವರ ಬೆಂಬಲಿಗರು ಅನುಚಿತವಾಗಿ ನಡೆದುಕೊಂಡರು ಎಂಬ ಮಾತು ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿದ್ದಕ್ಕೆ ಪಿಎಸ್​ಐ ಸತ್ಯನಾರಾಯಣ ಶಾಸಕರ ವಿರುದ್ಧವೇ ದೂರು ನೀಡಿದ್ದಾರೆ. ಹೀಗಾಗಿ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.ಒಟ್ಟಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ರಾಜಕೀಯ ಮೇಲಾಟಗಳು ತೀವ್ರಗೊಂಡಿದೆ.