10 ಕೋಟಿ ವಂಚನೆ ಪ್ರಕರಣ! ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿಗೆ ಬೆಂಗಳೂರು ಪೊಲೀಸರಿಂದ ಸಮನ್ಸ್​!!

10 ಕೋಟಿ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್​ಗೆ ಬೆಂಗಳೂರು ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ad


2015 ರಲ್ಲಿ ನಡೆದಿದ್ದ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್ ವಿರುದ್ಧ ನಗರದ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಪೊಲೀಸರು ಲತಾ ರಜನಿಕಾಂತ್ ಅವರಿಗೆ ಈ ಮೊದಲು ಕೂಡ ಸಮನ್ಸ್ ಜಾರಿ ಮಾಡಿದ್ದರು. ಆದರೆ ಆ ವಿಚಾರಣೆಗೆ ಲತಾ ರಜನಿಕಾಂತ್ ಗೈರಾದ ಹಿನ್ನೆಲೆಯಲ್ಲಿ ಈ ಬಾರಿ ಖುದ್ದು ಹಾಜರಾಗುವಂತೆ ಹಲಸೂರು ಪೊಲೀಸರು ಮೇ 2 ರಂದು ಸಮನ್ಸ್ ಜಾರಿ ಮಾಡಿದ್ದಾರೆ.

ಮೇ 6 ರಂದೇ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಈ ಸಮನ್ಸ್​ಗೆ ಪ್ರತಿಕ್ರಿಯೆ ನೀಡಿರುವ ರಜನಿಕಾಂತ್ ಪತ್ನಿ ಲತಾ, ತಾನು ಪ್ರಯಾಣದಲ್ಲಿರುವುದರಿಂದ ತಕ್ಷಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಮೇ 20 ರ ನಂತರ ವಿಚಾರಣೆ ಹಾಜರಾಗುವುದಾಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.

Adbureau ಎಡ್ವಟೈಸಿಂಗ್​ ಪ್ರೈವೇಟ್​ ಲಿಮಿಟೆಡ್​ ತಮಗೆ ಲತಾ ರಜನಿಕಾಂತ್​ ವಂಚಿಸಿರುವುದಾಗಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015 ರಲ್ಲಿ ದೂರು ದಾಖಲಿಸಿತ್ತು. ಈ ವೇಳೆ ವಂಚನೆ, ನಕಲಿ ದಾಖಲೆ ಸೃಷ್ಟಿಸಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಪೊಲೀಸ್ ಇನ್ಸಪೆಕ್ಟರ್ ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.