ಯಡಿಯೂರಪ್ಪಗೆ ಬಿಗ್ ರಿಲೀಫ್..! ಸದ್ಯಕ್ಕಿಲ್ಲ ಆಡಿಯೋ ಹಗರಣದ ಬಿಸಿ ..

ಆಪರೇಷನ್​ ಕಮಲದ ಆಡಿಯೋ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪಗೆ ಕೊಂಚ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ ಹೈಕೋರ್ಟ್ ವಿಭಾಗೀಯ ಪೀಠ , ಯಡಿಯೂರಪ್ಪ ಸೇರಿದಂತೆ ಇತರ ನಾಲ್ವರ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿ ಆದೇಶ ನೀಡಿದೆ.

ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸುದ್ದಿ ಮಾಡಿದ್ದ ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಬಿಎಸ್‌ವೈ ಹಾಗೂ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ನೀಡಿದ್ದ ದೂರಿನ ಮೇರೆಗೆ ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ದೇವದುರ್ಗ ಬಿಜೆಪಿ‌ ಶಾಸಕ ಶಿವನಗೌಡ ನಾಯಕ್, ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ, ಮಾಜಿ ಪತ್ರಕರ್ತ ಮರಮಕಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

 

ಪ್ರಕರಣದ ರದ್ದತಿ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನ್ಯಾ.ಪ್ರಲ್ಹಾದ್‌ ಗೋವಿಂದರಾವ್‌ ಮಾಲೀಪಾಟೀಲ್‌, ದೇವದುರ್ಗ ಪೊಲೀಸರು ದಾಖಲಿಸಿರುವ ಎಫ್ಐಆರ್ ಗೆ ಮಧ್ಯಂತರ ತಡೆ ನೀಡಿದ್ದಾರೆ. ಬಿಎಸ್‌ವೈ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಶಿವನಗೌಡ ‌ನಾಯಕ ಹಾಗೂ ಇತರರ ಪರ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದರು.