ಸಿನಿಮಿಯ ರೀತಿಯಲ್ಲಿ ನಡೆಯಿತು ದರೋಡೆ!

Caught On CCTV: Gold Shop Robbery in Nelamangala.

ರಾಜ್ಯದಲ್ಲಿ ಕಾನೂನ-ಸುವ್ಯವಸ್ಥೆ ಹದಗೆಡುತ್ತಿದೆ ಎಂಬ ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಬೆಂಗಳೂರು ಹೊರವಲಯದಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ ನಡೆದಿದೆ.

ad

ಐವರು ಮುಸುಕುದಾರಿಗಳು ಏಕಾಏಕಿ ಜುವೆಲ್ಲರಿ ಶಾಪ್​​ನೊಳಕ್ಕೆ ನುಗ್ಗಿದ್ದು, ಮಚ್ಚು-ಲಾಂಗ್​ನಿಂದ ಹಲ್ಲೆ ಮಾಡಿ ದರೋಡೆ ನಡೆಸಿದ್ದಾರೆ.  ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿ ಚಿನ್ನದ ಅಂಗಡಿಯಲ್ಲಿ ಘಟನೆ ನಡೆದಿದ್ದು, ನಿನ್ನೆ ಸಂಜೆ ವೇಳೆ ಅಂಗಡಿಗೆ ನುಗ್ಗಿದ ದರೋಡೆಕೋರರು ಏಕಾಏಕಿ ಅಂಗಡಿಯಲ್ಲಿ ನೌಕರರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅವರನ್ನು ರಕ್ಷಿಸಲು ಬಂದ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ್ದಾರೆ.

ಬಳಿಕ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಕ್ರೇಟ್​ ಸಮೇತವೇ ಬ್ಯಾಗ್​​ಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಇನ್ನು ಘಟನೆಯಲ್ಲಿ ಅಂಗಡಿ ಮಾಲಿಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಓರ್ವ ದರೋಡೆಕೋರರನ್ನು ಸ್ಥಳೀಯರು ಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ದರೋಡೆಕೋರರ ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುವಂತಿದೆ.