ಕನಕಪುರ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ

ಕಳೆದ ರಾತ್ರಿ ಕನಕಪುರ ಮುಖ್ಯ ರಸ್ತೆಯಲ್ಲಿ ಆಟೋ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಟೋ ಚಾಲನೆ ಮಾಡ್ತಿದ್ದ 22 ವರ್ಷದ ತೌಸಿಫ್ ಸಾವನ್ನಪ್ಪಿದ್ದು, ಮತ್ತೊರ್ವ 25 ವರ್ಷದ ಇಮ್ರಾನ್ ತಲೆಗೆ ತೀವ್ರ ಪೆಟ್ಟಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಬ್ಬರು ಸೋದರ ಸಂಬಂಧಿಗಳಾಗಿದ್ದು, ಗೋರಿ ಪಾಳ್ಯ ನಿವಾಸಿಗಳಾಗಿದ್ದಾರೆ. ಸಂಬಂಧಿಕರ ಮನೆಗೆ ಕಾರ್ಯಕ್ರಮ ನಿಮಿತ್ತ ಬಂದಿದ್ದ ಯುವಕರು ಹಾಲು ತರಲು ಕನಕಪುರ ಮುಖ್ಯರಸ್ತೆಗೆ ಬಂದಾಗ ಪಟ್ಟೆರಪಾಳ್ಯ ಬಳಿ ಹಿಂದಿನಿಂದ ವೇಗವಾಗಿ ಬಂದ ಮರಳು ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಕೆಳಗೆ ಬಿದ್ದ ಯುವಕ ತೌಸಿಫ್ ಮೇಲೆ ಲಾರಿ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ‌.. ಗಾಯಾಳು ಇಮ್ರಾನ್ ನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.