ಕೆ ಎಸ್ ಈಶ್ವರಪ್ಪಗೆ ಟಿಕೆಟ್ ಪಕ್ಕಾ !! ಶಿವಮೊಗ್ಗದ 5 ಕ್ಷೇತ್ರಗಳ ಟಿಕೆಟ್ ಫೈನಲ್ !!

ಮಲೆನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಶಿವಮೊಗ್ಗ ಜಿಲ್ಲೆಯ ಒಟ್ಟು 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳ ಬಿಜೆಪಿ ಟಿಕೆಟ್ ಫೈನಲ್ ಆಗಿದೆ.


ಶಿವಮೊಗ್ಗ ನಗರ ಕ್ಷೇತ್ರಕ್ಕೆ ಜಿಲ್ಲಾಧ್ಯಕ್ಷ ರುದ್ರೇಗೌಡ ಮತ್ತು ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವೆ ಪೈಪೋಟಿ ಇತ್ತು. ಇದೀಗ ಬಿಜೆಪಿ ಹೈಕಮಾಂಡ್ ಈಶ್ವರಪ್ಪನವರಿಗೆ ಟಿಕೆಟ್ ಅನ್ನೋ ಸಂದೇಶವನ್ನ ರವಾನಿಸಿದೆ ಅಂತ ಹೇಳಲಾಗುತ್ತಿದೆ. ಇನ್ನು ಶಿಕಾರಿಪುರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪರ್ಧೆ ಕನ್ಫರ್ಮ್ ಆಗಿದೆ. ಅದೇ ರೀತಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಆರಗ ಜ್ಞಾನೇಂದ್ರಗೆ ಟಿಕೆಟ್ ಅನ್ನೋದನ್ನ ಬಿಎಸ್​ವೈ ಘೋಷಣೆ ಮಾಡಿದ್ದಾರೆ.

ಜೊತೆಗೆ ಸಾಗರ ಕ್ಷೇತ್ರದಲ್ಲಿ ಹರತಾಳು ಹಾಲಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ನಡುವೆ ಪೈಪೋಟಿ ಇತ್ತು. ಅಲ್ಲಿ ಹರತಾಳು ಹಾಲಪ್ಪ ಅನ್ನೋದನ್ನ ಬಿಎಸ್​ವೈ ಸ್ಪಷ್ಟಪಡಿಸಿದ್ದಾರೆ. ಇನ್ನು ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕರೆತಂದಿರುವ ಕುಮಾರ್ ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಗೊಂದಲವಿದೆ. ಭದ್ರಾವತಿಯಲ್ಲೂ ಸೂಕ್ತ ಅಭ್ಯರ್ಥಿ ಸಿಕ್ಕಿಲ್ಲ.