ಬೆಂಗಳೂರಿನಲ್ಲಿ ಉತ್ತರ ಭಾರತೀಯನಿಂದ ಸಂಚಾರಿ ಪೇದೆ ಮೇಲೆ ಹಲ್ಲೆ!!

ಶಿಕ್ಷಣ ಸೇರಿದಂತೆ ವಿವಿಧ ಉದ್ದೇಶಕ್ಕಾಗಿ ನಗರಕ್ಕೆ ಬರುತ್ತಿರುವ ಉತ್ತರ ಭಾರತೀಯರು.

ಕನ್ನಡಿಗರ ಮೇಲೆ ನಡೆಸುತ್ತಿರುವ ದೌರ್ಜನ್ಯ ದಿನದಿಂದ- ದಿನಕ್ಕೆ ಏರುತ್ತಿದ್ದು, ಕನ್ನಡಿಗರ ಆತಂಕಕ್ಕೆ ಕಾರಣವಾಗಿದೆ. ಹೌದು ಓನ್​ ವೇ ದಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಆತನ ಸಂಚಾರಿ ಪೇದೆ ಮೇಲೆಯೇ ಸ್ಟಿಕ್​ನಿಂದ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸರ್ಜಾಪುರದಲ್ಲಿ ಘಟನೆ ನಡೆದಿದ್ದು, ಉತ್ತರ ಭಾರತ ಮೂಲದ ದಿಲೀಪ್ ಪೊಲೀಸ ಪೇದೆಯ ಮೇಲೆ ಹಲ್ಲೆ ಮಾಡಿದ ಆರೋಪಿ. ದಿಲೀಪ್ ಪತ್ನಿ ಮಕ್ಕಳ ಜೊತೆ ಒನ್ ವೇ ನಲ್ಲಿ ಕಾರು ಚಲಾಯಿಸಿಕೊಂಡು ಮೊಬೈಲ್​ನಲ್ಲಿ ಮಾತನಾಡಿಕೊಂಡು ಬರುತ್ತಿದ್ದ. ಇದನ್ನು ಎಚ್.ಎಸ್.ಆರ್.ಲೇಔಟ್​​ನ ಸಂಚಾರಿ ಪೊಲೀಸ್ ಪೇದೆ ಭೀಮಾಶಂಕರ ಪ್ರಶ್ನಿಸಿದ್ದಾನೆ. ಇದಕ್ಕೆ ಕೆರಳಿದ ದಿಲೀಪ ಭೀಮಾಶಂಕರ ಮೇಲೆಯೇ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ.

ಅಷ್ಟೇ ಅಲ್ಲ ಪೇದೆಗೆ ಜೀವಬೆದರಿಕೆ ಹಾಕಿದ್ದು, ಮನಬಂದಂತೆ ಅವಾಚ್ಯಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಸಾರ್ವಜನಿಕರೊಬ್ಬರು ಮೊಬೈಲ್​​ನಲ್ಲಿ ರೆಕಾರ್ಡ್​ ಮಾಡಿದ್ದು, ಪೊಲೀಸ್ ಇಲಾಖೆಗೆ ನೀಡಿದ್ದಾರೆ. ಇತ್ತೀಚೆಗೆ ನಗರದಲ್ಲಿ ಉತ್ತರ ಭಾರತದ ಜನರು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇತ್ತೀಚಿಗಷ್ಟೆ ಮಾರತಹಳ್ಳಿಯಲ್ಲಿ ಕನ್ನಡ ಮಾತನಾಡಿದ್ದಕ್ಕೆ ಯುವತಿಯೊರ್ವಳ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಕನ್ನಡದಲ್ಲಿ ನಿಯಮ ಉಲ್ಲಂಘನೆ ಪ್ರಶ್ನಿಸಿದ್ದಕ್ಕೆ ಪೇದೆ ಮೇಲೆ ಯೇ ಹಲ್ಲೆ ಯತ್ನ ನಡೆದಿದ್ದು, ಕರ್ನಾಟಕದಲ್ಲಿ ಕನ್ನಡಿಗರಿಗೇ ರಕ್ಷಣೆ ಇಲ್ಲ ಎಂಬಂತ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.