ಕಲಬುರಗಿಯಷ್ಟೇ ಅಲ್ಲ ವಿಜಯಪುರ ಜಿಲ್ಲೆಯಾದ್ಯಂತ ವರುಣ ಆರ್ಭಟಿಸಿದ್ದಾನೆ. ಮಳೆಯ ಆರ್ಭಟಕ್ಕೆ ಸಿಂದಗಿ ತಾಲೂಕಿನ ತಾರಾಪುರ ಗ್ರಾಮ ಮುಳುಗಡೆ ಭೀತಿ ಎದುರಾಗಿದೆ. ಭಾರೀ ಮಳೆಗೆ 20ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಇನ್ನು ಮನೆ ಕುಸಿದಿದ್ದರಿಂದ 4 ವರ್ಷದ ಕೀರ್ತಿ ಬಾಲಕಿಗೆ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಳೆಯಿಂದ ಇಡೀ ಗ್ರಾಮವೇ ಕಂಗಾಲಾಗಿದ್ದು, ಈ ವರೆಗೂ ಸ್ಥಳಕ್ಕೆ ಅಧಿಕಾರಿಗಳು ಭೆಟಿ ನೀಡಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here