ಎರಡೆರಡು ವೋಟರ್ ಐಡಿ ಆರೋಪ- ಎಮ್​ಎಲ್​ಸಿ ಇಬ್ರಾಹಿಂ ವಿರುದ್ಧ ಕಂಪ್ಲೆಂಟ್​!

ಲೋಕಲ್​​​ ಫೈಟ್​ ಹೊತ್ತಿನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರಮಾಪ್ತ ಹಾಗೂ ಎಂಎಲ್​ಸಿ ಸಿಎಂ ಇಬ್ರಾಹಿಂ ವಿರುದ್ಧ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಾನೂನು ಬಾಹಿರವಾಗಿ ಎರಡು ಕ್ಷೇತ್ರಗಳಲ್ಲಿ ಇಬ್ರಾಹಿಂ ವೋಟರ್ ಐಡಿ ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

 

ಶಿವಮೊಗ್ಗದ ಭದ್ರಾವತಿ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಇಬ್ರಾಹಿಂ ವೋಟರ್ ಐಡಿ ಹೊಂದಿದ್ದಾರೆ. ಇಬ್ರಾಹಿಂ ವಿರುದ್ಧ ಕಾನೂನು ಉಲ್ಲಂಘನೆ ಆರೋಪದಡಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲು ಬಿಜೆಪಿ ಮುಂದಾಗಿದೆ.
ಬಿಬಿಎಂಪಿ ವಿರೋಧ ಪಕ್ಷ ನಾಯಕ ಪದ್ಮನಾಭರೆಡ್ಡಿ ನೇತೃತ್ವದಲ್ಲಿ ನಾಳೆ‌ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ನಿಯಮಗಳ ಪ್ರಕಾರ ಒಬ್ಬ ವ್ಯಕ್ತಿಗೆ ಒಂದೇ ಮತ ಚಲಾವಣೆ ಅವಕಾಶವಿರೋದರಿಂದ ಎರಡು ಕಡೆ ವೋಟರ್ ಐಡಿ ಹೊಂದಿರೋದು ಅಪರಾಧವಾಗಿದೆ.