ಬಸವಣ್ಣ ಐಕ್ಯ ಸ್ಥಳಕ್ಕೆ ಅಮಿತ್ ಶಾ ಭೇಟಿ !!

 

ad

ಕರ್ನಾಟಕದಲ್ಲಿ ಕಮಲ ಅರಳಿಸಲು ಸಜ್ಜಾಗಿರುವ ಅಮಿತ್​ ಶಾ ಮತ್ತೆ-ಮತ್ತೆ ಕರ್ನಾಟಕದಾದ್ಯಂತ ಸಂಚರಿಸಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಮತ್ತೆ ಮೂರು ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ಬಸವಣ್ಣನವರ ಐಕ್ಯ ಸ್ಥಳ ಕೂಡಲಸಂಗಮಕ್ಕೆ ಭೇಟಿ ನೀಡಿ ಐಕ್ಯ ಸ್ಥಳಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಲಕ್ಷ್ಮಣ ಸವಧಿ ಸೇರಿದಂತೆ ಹಲವು ಬಿಜೆಪಿ ನಾಯಕರು ಅವರೊಂದಿಗಿದ್ದರು. ಬಸವಣ್ಣನವರ ಪುತ್ಥಳಿಗೆ ಪೂಜೆ ಸಲ್ಲಿಸಿದ ಬಳಿಕ ಐಕ್ಯ ಮಂಟಪಕ್ಕೆ ತೆರಳಿದ ಅಮಿತ್ ಶಾ ಹೊರಗಿನಿಂದಲೇ ಐಖ್ಯಮಂಟಪಕ್ಕೆ ಕೈಮುಗಿದು ಹಿಂತಿರುಗಿದರು.

ಇನ್ನೆರಡು ದಿನಗಳ ಕಾಲ ರಾಜ್ಯದ ವಿವಿಧೆಡೆ ಭೇಟಿ ನೀಡಲಿರುವ ಅಮಿತ್ ಶಾ ಬೀಳಗಿ, ವಿಜಯಪುರ, ಬಾಗಲಕೋಟೆ, ವಿಜಯಪುರಗಳಲ್ಲಿ ರೋಡ್‌ ಶೋ ಜೊತೆಗೆ ಹಲವು ಸಂವಾದ ಕಾರ್ಯಕ್ರಮ ಹಾಗೂ ಪಕ್ಷದ ಮುಖಂಡರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ನಾಳೆ ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ.ಒಟ್ಟಿನಲ್ಲಿ ಮತ ಸೆಳೆಯಲು ಅಮಿತ್ ಶಾ ಇನ್ನಿಲ್ಲದ ಸರ್ಕಸ್ ಆರಂಭಿಸಿದ್ದಾರೆ.