ಬಾಗಲಕೋಟೆಯಲ್ಲಿ ಕಾಂಗ್ರೆಸ್ ಸೀಟ್ ಹಂಚಿಕೆಯ ನಂತರ ಭಿನ್ನಮತ ಸ್ಫೋಟ.!! ಹೇಗಿತ್ತು ಗೊತ್ತಾ ಅವರ ಆಕ್ರೋಶ??

ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ,ಬಾಗಲಕೋಟೆ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆಯ ಬಿಸಿ ಜೋರಾಗಿದೆ.

ಬಾಗಲಕೋಟೆ ವಿಧಾನ ಸಭೆ ಕ್ಷೇತ್ರದ ಟಿಕೆಟ್ ಮಾಜಿ ಸಚಿವ ಎಚ್.ವೈ.ಮೇಟಿ ಅವರ ಪಾಲಾಗಿದ್ದರಿಂದ ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಪಿ.ಎಚ್.ಪೂಜಾರ್ ಅವರು ಅಸಮಾಧಾನಗೊಂಡಿದ್ದು ಬಂಡಾಯದ ಬಾವುಟ ಹಾರಿಸಿದ್ದಾರೆ.

ಪಿ.ಎಸ್.ಪೂಜಾರ್ ಬೆಂಬಲಿಗರು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ ಅವರ ಬಾಗಲಕೋಟೆ ನಿವಾಸದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇತ್ತ ಬಾದಾಮಿ ಯಲ್ಲಿ.ಶಾಸಕ ಚಿಮ್ಮನಕಟ್ಟಿ ಬದಲಾಗಿ ಡಾ.ದೇವರಾಜ ಅವರಿಗೆ ಟಿಕೆ್ ನೀಡಿದ ಹಿನ್ನೆಲೆಯಲ್ಲಿ ಚಿಮ್ಮನಕಟ್ಟಿ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಬಾದಾಮಿ ಪಟ್ಟಣದ ರಾಮದುರ್ಗ ಕ್ರಾಸ ಬಳಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಚಿಮ್ಮನಕಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು.

ಇನ್ನು ಮುಧೋಳದಲ್ಲಿ ಸಚಿವ ಆರ್.ಬಿ.ತಿಮ್ಮಾಪೂರ್ ಬದಲಾಗಿ ಸತೀಶ ಬಂಡಿವಡ್ಡರ್ ಅವರಿಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ತಿಮ್ಮಾಪೂರ್ ಬೆಂಬಲಿಗರು ಮುಧೋಳ ನಗರದ ರನ್ನ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ತಿಮ್ಮಾಪೂರ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.

ಪ್ರತ್ಯುತ್ತರ ನೀಡಿ

Please enter your comment!
Please enter your name here