ಮತ್ತೆ ಸಂಕಷ್ಟಕ್ಕೆ ಸಿಲುಕಿದ ರಾಮಕಥಾ ಗಾಯಕಿ ಪ್ರೇಮಲತಾ!!

ರಾಮಚಂದ್ರಾಪುರ ಮಠದ ವಿರುದ್ಧ ಬ್ಲಾಕ್​ಮೇಲ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಮತ್ತೊಮ್ಮೆ ಸಂಕಷ್ಟಕ್ಕಿಡಾಗಿದ್ದಾರೆ.

ಬ್ಲಾಕ್​ಮೇಲ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಲತಾ ದಿವಾಕರ್ ಹಾಗೂ ಅವರ ಪತಿ ದಿವಾಕರ್​​ ಸೇರಿ ಒಟ್ಟು 7 ಜನರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಹೊನ್ನಾವರ ನ್ಯಾಯಾಲಯ ಆದೇಶಿಸಿದೆ. ರಾಮಚಂದ್ರಾಪುರ ಮಠದ ರಾಘವೇಶ್ವರ್ ಭಾರತೀ ಮಹಾಸ್ವಾಮಿಗಳ ವಿರುದ್ಧದ ಬ್ಲಾಕ್​ಮೇಲ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ ಬಿ ರಿಪೋರ್ಟ್​ ಸಲ್ಲಿಸಿತ್ತು.

 

ಆದರೇ ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್​​​ ನ್ನು ನ್ಯಾಯಾಲಯ ನಿರಾಕರಿಸಿದ್ದು, ಮತ್ತೊಮ್ಮೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸುವಂತೆ ಆದೇಶಿಸಿರುವ ನ್ಯಾಯಾಲಯ ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಹೀಗಾಗಿ ಕೇಸ್​​​ನಿಂದ ಬಚಾವಾದ ಖುಷಿಯಲ್ಲಿದ್ದ ಪ್ರೇಮಲತಾ ದಂಪತಿ ಸೇರಿ ಉಳಿದ ಆರೋಪಿಗಳು ಮತ್ತೊಮ್ಮೆ ಸಂಕಷ್ಟಕ್ಕಿಡಾಗಿದ್ದಾರೆ.