ಸಿಎಂ ಸಿದ್ದರಾಮಯ್ಯಗೆ ತೀವ್ರ ಜ್ವರ !! ಪ್ರತ್ಯೇಕ ಧರ್ಮಕ್ಕೆ ಎಫೆಕ್ಟ್ !!

Cabinet Meeting Cancelled: CM Siddaramaiah Suffering From Fever.

ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಬೇಕಿತ್ತು.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ರಚನೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಿತ್ತು. ಇದು ರಾಜಕೀಯವಾದ ಹೊಸ ಅದ್ಯಾಯಕ್ಕೆ ಕಾರಣವಾಗುತ್ತಿತ್ತು. ಪರ ವಿರೋಧ ಚರ್ಚೆಗಳು ಪ್ರಾರಂಭವಾಗಿ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಪ್ರಾರಂಭವಾಗಬೇಕಿತ್ತು. ಆದರೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. ಕಡಿಮೆಯಾಗಬಹುದು ಎಂದು ನಿರ್ಲಕ್ಷಿಸಿದ ಸಿದ್ದರಾಮಯ್ಯ, ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಇದೀಗ ಜ್ವರ ಉಲ್ಬಣಗೊಂಡಿದ್ದು ಸಿದ್ದರಾಮಯ್ಯ ತನ್ನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಜ್ವರದ ಹಿನ್ನಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ನಡೆಯಬೇಕಿದ್ದ ಮಹತ್ವದ ಸಂಪುಟ ಸಭೆಯನ್ನೂ ಮುಂದೂಡಿಕೆ ಮಾಡಲಾಗಿದೆ. ಮುಂದಿನ ಸೋಮವಾರಕ್ಕೆ ಸಚಿವ ಸಂಪುಟ ಸಭೆಯನ್ನು ಮುಂದೂಡಿಕೆ ಮಾಡಿರುವ ಸಿಎಂ, ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಮುಗಿಸಿ ರೆಸ್ಟ್ ಮಾಡಲಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸ್ಸು ಮತ್ತು ಅಲ್ಪಸಂಖ್ಯಾತ ಸ್ಥಾನಮಾನ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಸಿಎಂಗೆ ಕಾಡಿದ ಜ್ವರ ಪ್ರತ್ಯೇಕ ಧರ್ಮದ ಮೇಲೆ ಪರಿಣಾಮ ಬಿದ್ದಿದೆ.

From the web

ಪ್ರತ್ಯುತ್ತರ ನೀಡಿ

Please enter your comment!
Please enter your name here