ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ !! ಕೇಂದ್ರ ಸರ್ಕಾರ, ಮೋದಿ, ಶಾ ವಿರುದ್ಧ ಆಕ್ರೋಶ

ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿಎಸ್.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದು, ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.

 

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಭುವನೇಶ್ವರಿ ವೃತ್ತದ ವರೆಗೆ ಮೆರವಣಿಗೆಯಲ್ಲಿ ತೆರಳಿ, ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಸಿದರು.

ದಾರಿಯುದ್ದಕ್ಕೂ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ದ ದಿಕ್ಕಾರದ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿದ್ದ ರಾಜ್ಯಪಾಲ ವಜುಬಾಯಿವಾಲ ರವರ ನಡೆಯನ್ನು ಖಂಡಿಸಿದರು..

ರಾಜ್ಯಪಾಲ ವಜುಬಾಯಿ ವಾಲ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ, ಯಾವ ಪಕ್ಷ ಬಹುಮತವಿಲ್ಲ, ಆ ಪಕ್ಷಕ್ಕೆ ಸರ್ಕಾರ ರಚನೆ ಮಾಡಲು ಆಹ್ವಾನ ನೀಡಿದ್ದಾರೆ, ಬಹುಮತಕ್ಕೆ ಅವಶ್ಯವಿರುವ 113 ಸೀಟುಗಳನ್ನು ತೋರಿಸಿದ ಮೇಲೆ ಆಹ್ವಾನ ನೀಡಬೇಕಿತ್ತು. ನಾವು ಕಾಂಗ್ರೆಸ್ ಮತ್ತು ಜೆಡಿಎಸ್ 117 ಸೀಟುಗಳನ್ನು ರಾಜ್ಯಪಾಲರ ಮುಂದೆ ಮಂಡಿಸಿದ್ದೇವೆ, ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಕಿಡಿಕಾರಿದರು.