ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ರಂಬಾಪುರಿ ಗರಂ ! ಎಲೆಕ್ಷನ್ ಟೈಮಲ್ಲಿ ಕೈ ಸುಟ್ಕೊಳ್ತಾರಾ ಸಿಎಂ ಸಿದ್ದರಾಮಯ್ಯ !!

CM Plan to Recommend Despite Rambhapuri's Warning.
CM Plan to Recommend Despite Rambhapuri's Warning.

ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನದ ಶಿಫಾರಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸುತ್ತಿದ್ದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಫಾರಸು ಮಾಡಿದರೆ ಮುಂದಿನ ದಿನಗಳಲ್ಲಿ ತಕ್ಕ ಪ್ರಾಯಶ್ಚಿತ್ತವಾಗಿ ಕೆಟ್ಟ ದಿನಗಳನ್ನು ಎದುರಿಸಬೇಕಾಗುತ್ತೆ ಎಂದು ರಂಬಾಪುರಿ ಶ್ರೀಗಳು ಎಚ್ಚರಿಕೆ ನೀಡಿದರು. ಶ್ರೀಗಳ ಎಚ್ಚರಿಕೆಯ ನಡುವೆಯೂ ಅಲ್ಪಸಂಖ್ಯಾತ ಸ್ಥಾನಮಾನದ ಶಿಫಾರಸಿಗೆ ಯತ್ನ ನಡೆಯುತ್ತಿದೆ.ನ್ಯಾ.ನಾಗಮೋಹನದಾಸ್​ ಸಮಿತಿ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಿದ್ದು, ಇಂದು ಸಂಜೆ 5.30ಕ್ಕೆ ನಡೆಯುವ ಸಂಪುಟಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

 

ಹಲವು ಮಠಾಧೀಶರು, ವೀರಶೈವ ಮುಖಂಡರ ವಿರೋಧದ ನಡುವೆಯೂ ಶಿಫಾರಸು ಮಾಡಲು ಮುಂದಾಗಿದ್ದು, ಸರ್ಕಾರದ ನಡೆಗೆ ಸಂಪುಟದ ಕೆಲ ಸಚಿವರು, ಶಾಸಕರಿಂದಲೂ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರಕ್ಕೆ ಶಿಫಾರಸು ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಒಳಗೆ ಭಿನ್ನಮತ ಭುಗಿಲೇಳುವ ಸಾಧ್ಯತೆ ಇದೆ.

 

ನಿನ್ನೆಯಷ್ಟೇ ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪಂಚಪೀಠದಲ್ಲೊಂದಾದ ಬಾಳೆ ಹೊನ್ನೂರು ರಂಭಾಪುರಿ ಪೀಠಾಧ್ಯಕ್ಷರಾದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಸರ್ಕಾರದ ಮೇಲೆ ಗುಡುಗಿದ್ದಾರೆ. ಲಿಂಗಾಯತರನ್ನು ಅಲ್ಪಸಂಖ್ಯಾತರೆಂದು ಘೋಷಿಸಲು ಶಿಫಾರಸು ಮಾಡಿದ್ರೆ ಮುಂದಿನ ದಿನದಲ್ಲಿ ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ವೀರಶೈವ ರಾಷ್ಟ್ರೀಯ ಮಠಾಧೀಶರ ಪರಿಷತ್​​ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಮುಂದಿನ ದಿನದಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದಿದ್ದಾರೆ.

From the web

ಪ್ರತ್ಯುತ್ತರ ನೀಡಿ

Please enter your comment!
Please enter your name here