CM Siddaramaiah new plan for upcoming election | ಸಿಎಂ ಸಿದ್ದರಾಮಯ್ಯ ಮುಂದಿನ ವರ್ಷದ ವಿಧಾನ ಸಭಾ ಚುನಾವಣೆಗೆ ಮಾಸ್ಟರ್ ಪ್ಲಾನ್ ಮಾಡ್ತಾ ಇದ್ದಾರೆ.

0
8

ಸಿಎಂ ಸಿದ್ದರಾಮಯ್ಯ ಮುಂದಿನ ವರ್ಷದ ವಿಧಾನ ಸಭಾ ಚುನಾವಣೆಗೆ ಮಾಸ್ಟರ್ ಪ್ಲಾನ್ ಮಾಡ್ತಾ ಇದ್ದಾರೆ. ಚುನಾವಣೆ ಬರುತ್ತಿದ್ದಂತೆ ವರುಣಾ ಹಾಗೂ ಚಾಮುಂಡೇಶ್ವರಿ ವಿದಾನಸಭಾ ಕ್ಷೇತ್ರದ ಮೇಲೆ ಓಲವು ಜಾಸ್ತಿ ಯಾಗ್ತಾ ಇದೆ. ಇಂದು ಮತ್ತು ನಾಳೆ ಸಂಪೂರ್ಣವಾಗಿ ಕ್ಷೇತ್ರಕ್ಕಾಗಿ ತಮ್ಮ ಸಮಯವನ್ನು ಮೀಸಲಿಟ್ಟಿದ್ದು, ಹಲವು ಅಭಿವೃದ್ದಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಿದ್ದಾರೆ.
=====
ಕಳೆದೆರಡು ದಿನಗಳ ಹಿಂದೆ ಗೃಹ ಕಚೇರಿ ಕೃಷ್ಣದಲ್ಲಿ ವರುಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿಎಂ ಸಭೆ ನಡೆಸಿದ್ರು .
ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಿದ್ದಾರೆ .
ವರುಣಾ ಕ್ಷೇತ್ರದಲ್ಲಿ ಪುತ್ರ ಡಾ. ಯತೀಂದ್ರ ಅವರನ್ನು ಕಣಕ್ಕಿಳಿಸೋ ಕಾರಣಕ್ಕಾಗಿ ಅಲ್ಲಿನ ಎಲ್ಲಾ ಕಾರ್ಯಗಳನ್ನು ತ್ವರಿತ ಗತಿಯಲ್ಲಿ ಮುಗಿಸ್ತಿದ್ದಾರೆ. ವರುಣಾ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟ ಬಳಿಕ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಲು ಸಿಎಂ ಸಿದ್ದು ಮುಂದಾಗಿದ್ದಾರೆ. ಹೀಗಾಗಿಯೇ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ನಿವೇಶನ ಹಂಚಿಕೆ, ಸಂಕೀರ್ಣಗಳ ಉದ್ಘಾಟನೆ ಮಾಡಲಾಗ್ತಿದೆ.

LEAVE A REPLY

Please enter your comment!
Please enter your name here