ಬಾಗಲಕೋಟೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್!

ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರದ್ದೇ ಕಾರುಬಾರು ನಡೆದಿದೆ. ಒಂದೆಡೆ ಶೋಭಾಕರಂದ್ಲಾಜೆಯಂತಹ ಅನುಭವಿ ಮಹಿಳೆಯರು ಕಣಕ್ಕಿಳಿದಿದ್ದರೇ ಇನ್ನೊಂದೆಡೆ ಬಾಗಲಕೋಟೆಯಲ್ಲಿ  ಕ್ಷೇತ್ರದ ಮೈತ್ರಿಪಕ್ಷದ  ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರು ಅದೃಷ್ಟ ಪರೀಕ್ಷೆಗೆ ಮುಂಧಾಗಿದ್ದಾರೆ.

ad

ಮೈತ್ರಿ ಪಕ್ಷದಿಂದ ಕಣಕ್ಕಿಳಿದಿರುವ  ವೀಣಾ ಕಶಾಪ್ಪರವರು ಮೈತ್ರಿ ಪಕ್ಷದ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತ ಕೇಳೋದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಅಬ್ಬರದ ಪ್ರಚಾರವನ್ನು ನಡೆಸಿದ್ದು, ತಮಗಿರುವ ಸ್ಟಾರ್​​ ಇಮೇಜ್​ನಿಂದಲೇ ಮತ ಬೇಟೆಯ ಪ್ರಯತ್ನ ನಡೆಸಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ ಬರಗಿ, ನಾಗರಾಳ, ಗುಲಗಾಲ, ಕುಳಲಿ ಗ್ರಾಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವೀಣಾ ಕಾಶಪ್ಪನವರ ಪರವಾಗಿ ಇಂದು ಮಾತಯಾಚನೆ ಮಾಡಿದರು. ಈ ವೇಳೆ ಚುನಾವಣಾ ಪ್ರಚಾರದಲ್ಲಿ ಮತನಾಡಿದ ವೀಣಾ ಕಾಶಪ್ಪನವರು ಮಹಿಳಾ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನನಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಆಶೀರ್ವಾದ ಮಾಡಿ ಈ ಚುನಾವಣೆಯನ್ನು ಎದರಿಸಲು ನನಗೆ ಶಕ್ತಿ ತುಂಬಿ ಅಂತಾ ಮತದಾರರಲ್ಲಿ ಮನವಿ ಮಾಡಿಕೊಂಡರು.

ಸದ್ಯ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪರವರಿಗೆ ಸಚಿವ ಆರ್.ಬಿ.ತಿಮ್ಮಾಪೂರ್,ಮಾಜಿ ಸಚಿವರಾದ ಎಸ್.ಆರ್.ಪಾಟೀಲ್, ಉಮಾಶ್ರೀ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಿರಿಯ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಸಾಥ್ ನೀಡಿದರು.