ತರಳಬಾಳು ಹುಣ್ಣಿಮೆಗೆ ಬರ್ತಾರಾ ಮೋದಿ ?

ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಇದೇ ತಿಂಗಳ 23 ರಿಂದ 9 ದಿನಗಳ ಕಾಲ ನಡೆಯಲಿರುವ ಭಾವೈಕ್ಯತಾ ಪರಿಷತ್ತು ಎಂದೇ ಹೆಸರಾಗಿರುವ ತರಳಬಾಳು ಹುಣ್ಣಿಮೆಯ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.

ಕೇಂದ್ರದ ಮಾಜಿ ಸಚಿವ ಜಿಎಂ ಸಿದ್ದೇಶ್ವರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದು, ಮೋದಿ ಆಗಮಿಸುವ ಸಾಧ್ಯತೆ ಇದೆ. ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿಯವರ ಸಮ್ಮುಖದಲ್ಲಿ 9 ದಿನಗಳ ಕಾಲ ನಡೆಯುವ ತರಳ ಬಾಳು ಹುಣ್ಣಿಮೆ ಕಾರ್ಯಕ್ರಮ ರಾಜ್ಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ.

 

9 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ, ಸೈದ್ಧಾಂತಿಕ ವಿಚಾರಗೋಷ್ಠಿಗಳು ನಡೆಯುತ್ತವೆ. ಅಷ್ಟೇ ಅಲ್ಲ ಒಂಬತ್ತು ದಿನಗಳ ಕಾಲ ವಿವಿಧ ಸಾಂಸ್ಕ್ರತಿಕ ಪರಂಪರೆ ಮತ್ತು ಚರ್ಚಾಗೋಷ್ಠಿಗಳು ನಡೆಯಲಿದ್ದು, ಧರ್ಮ , ರಾಜಕೀಯ , ಸಂಸ್ಕೃತಿ ಮತ್ತಿತರ ವಿಚಾರಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ಇನ್ನೇನು ರಾಜ್ಯದಲ್ಲಿ ಚುನಾವಣೆ ಕೂಡ ಸಮೀಪಿಸುತ್ತಿರುವುದರಿಂದ ಮೋದಿ ಭೇಟಿ ಬಿಜೆಪಿ ಪಾಲಿಗೆ ಫಲದಾಯಕವಾಗಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಈ ಸಾಂಸ್ಕೃತಿಕ ಹಬ್ಬದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.