ಸಾಲಬಾಧೆಗೆ ರೈತ ಆತ್ಮಹತ್ಯೆ !

 

ಸಾಲಬಾಧೆ ತಾಳಲಾರದೇ ಮಲಪ್ರಭೆ ನದಿಗೆ ಹಾರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿರಬಡಿಗೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನ ಫಕೀರಗೌಡ ಬೆಳಗೌಡರ್ (೫೫) ಎಂದು ಗುರ್ತಿಸಲಾಗಿದೆ.

 

 

ಈತ ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಬೆಳೆಗಳು ಕೈಕೊಟ್ಟಿದ್ದರಿಂದ ವಿವಿಧ ಬ್ಯಾಂಕಗಳು ಸೇರಿದಂತೆ ವಿಬಿಧೆಡೆ ಅಂದಾಜು ಐದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರೆದಿದೆ.