ಹಾಸನದಲ್ಲಿ ಎರಡು ಪಕ್ಷಗಳ ನಡುವಿನ ಕಾರ್ಯಕರ್ತರ ನಡುವೆ ಮಾರಾಮಾರಿ

ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಎರಡು ಪಕ್ಷದವರು ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ದುದ್ದ ಹೋಬಳಿಯ ಕೋಡಿಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ನಂದಕುಮಾರ್, ವೆಂಕಟೇಶ್, ಪ್ರಕಾಶ್, ಸಿದ್ದೇಶ್ ಮತ್ತು ಮಂಜೇಗೌಡ, ಹಾಗೂ ಜೆಡಿಎಸ್ ನ ಕಾರ್ಯಕರ್ತರಾದ ರವಿ, ಲೋಕೇಶ್ ತೀವ್ರವಾಗಿ ಹಲ್ಲೆಗೊಳಗಾಗಿದ್ದು, ಹಾಸನ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇ.12ರಂದು ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ಗಲಾಟೆಯೇ ಇಂದು ಮಾರಾಮಾರಿಗೆ ಕಾರಣವಾಗಿದ್ದು, ಕಾಂಗ್ರೆಸ್ ನ ಐವರಿಗೆ ಹಾಗೂ ಜೆಡಿಎಸ್ ನ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೇ ಮಚ್ಚಿನಿಂದ, ಚಾಕುವಿನಿಂದ ಹಲ್ಲೆ ಮಾಡಿರುವುದರಿಂದ ತಲೆ, ಕೈ, ಹೊಟ್ಟೆ ಬಾಗಕ್ಕೆ ತೀವ್ರವಾಗಿ ಗಾಯಗೊಂಡಿದ್ದು, ಜೆಡಿಎಸ್ ನ ಕಾರ್ಯಕರ್ತರಾದ ರವಿ, ಲೋಕೇಶ್, ನವೀನ್, ಮಂಜು ಎಂಬವವರು ಹಲ್ಲೆ ಮಾಡಿದ್ದಾರೆಂದು  ಕಾಂಗ್ರೆಸ್ನವರು ಆರೋಪಿಸಿದ್ದಾರೆ..

 

 

ಈ ಸಂಬಂಧ ಎರಡು ಕಡೆಯವರಿಂದ ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Avail Great Discounts on Amazon Today click here