ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಚಾಲನೆ….!

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ದಿನಾಂಕ:14.03.2019 ರಿಂದ 22.03.2019 ರವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಜೆ ಚಾಲನೆ ಮತ್ತು ಧರ್ಮಧ್ವಜ ಸ್ಥಾಪನೆ, ನಾಂದಿ ಪೂಜಾ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಸದ್ಭಕ್ತರಿಗೆ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರು, ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರರಾದ ಶ್ರೀ ರಿಶಾಂಕ್ ದೇವಾಡಿಗ ರವರು ಹಾಗೂ ಸದ್ಭಕ್ತರು ಉಪಸ್ಥಿತರಿದ್ದರು.