ಎಸ್​ಪಿಗೆ ಸಗಣಿ ತೂರಿದ ಬಿಜೆಪಿ ಕಾರ್ಯಕರ್ತರು

Haveri: Protester Throws Tomato,Cow dung to Police.
Haveri: Protester Throws Tomato,Cow dung to Police.

ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಎಸ್​ಪಿ ಕಚೇರಿಗೆ ಎಮ್ಮೆ ನುಗ್ಗಿಸಿ, ಎಸ್​ಪಿ ಯತ್ತ ಸಗಣಿ ಎಸೆದು ಅವಾಂತರ ಸೃಷ್ಟಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಕೇಂದ್ರದ ಫಸಲಭೀಮಾ ಯೋಜನೆ,ಬೆಳೆವಿಮೆ ಹಾಗೂ ಬರ ಪರಿಹಾರ ವಿಳಂಬ ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದ ಬಿಜೆಪಿ ಈ ರೀತಿ ವರ್ತಿಸಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಹಾವೇರಿ ಜಿಲ್ಲಾಧಿಕಾರಿ ಕಛೇರಿ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಗೋವಿನಜೋಳ, ಶೇಂಗಾಗಳಿಗೆ ಬೆಂಬಲ ಬೆಲೆ ಘೋಷಿಸಬೇಕು.ಹಾಗೂ ಖರೀದಿ ಕೇಂದ್ರ ಆರಂಭಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

 

 

ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿಗೆ ಟೊಮೆಟೊ ಎಸೆಯುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕಚೇರಿಗೆ ನುಗ್ಗಲು ಯತ್ನಿಸಿದ್ದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಕೆಲ ಕಿಡಿಗೇಡಿ ಪ್ರತಿಭಟನಾಕಾರರು ಎಸ್​ಪಿಯತ್ತ ಸಗಣಿ ತೂರಿದರು.ಸ್ಥಳದಲ್ಲಿ ಕೆಲಕಾಲ ಉದ್ವಿಘ್ನ ವಾತಾವರಣ ನಿರ್ಮಾಣವಾಗಿತ್ತು.