ಕಾಂಗ್ರೆಸ್​ ಗೆ ಮತ್ತೊಂದು ಶಾಕ್​! ರಾಜೀನಾಮೆಯತ್ತ ಮುಖ ಮಾಡಿದ ಪ್ರಿಯಾಂಕಾ!!

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಯಾಗಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿದೆ. ಅಲ್ಲದೆ ಕಾಂಗ್ರೆಸ್ ಪಾಳಯದಲ್ಲಿ ಈಗಾಗಲೇ ಶಾಸಕರ ರಾಜೀನಾಮೆ ಪರ್ವವೆ ಎದ್ದಿದೆ. ಇನ್ನೂ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ಹಲವು ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರುಗಳೇ ರಾಜೀನಾಮೆ ಸಲ್ಲಿಸಲು ಶುರು ಮಾಡಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಸಾಲಿಗೆ ಸಹೋದರಿ ಪ್ರಿಯಾಂಕಾ ಕೂಡ ಸೇರ್ಪಡೆಯಾಗುವ ಮುನ್ಸೂಚನೆ ಲಭ್ಯವಾಗಿದೆ.

ad

ಹೌದು ಲೋಕಸಭಾ ಚುನಾವಣೆಯಲ್ಲಿ ಸೋಲುಂಡ  ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಉತ್ತರ ಪ್ರದೇಶದ ಪಶ್ಚಿಮ ಭಾಗದ ಜವಾಬ್ದಾರಿಯನ್ನು ಹೊತ್ತಿದ್ದ ಕಾಂಗ್ರೆಸ್ ನ ಮತ್ತೊಂದು ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ, ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ , ಮಿಲಿಂದ್ ದೆವೋರಾ ಹೀಗೆ ಪ್ರಮುಖ ನಾಯಕರೆಲ್ಲಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜೀನಾಮೆ ಪರ್ವವೇ ಆರಂಭವಾಗಿದೆ.

ಅಲ್ಲದೇ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಪ್ರಿಯಾಂಕಾ ಗಾಂಧಿ ಸೇರ್ಪಡೆಯಾದರು. ಪ್ರಿಯಾಂಕಾ ಗಾಂಧಿ ಎಂಟ್ರಿ ಪಕ್ಷಕ್ಕೆ ಲಾಭ ತಂದುಕೊಡಲಿದೆ ಎಂಬುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿತ್ತು. ಆದರೆ ಉತ್ತರ ಪ್ರದೇಶದಲ್ಲಿ ಮೋದಿ ಅಲೆ, ಕೇಸರಿ ಬಾವುಟ ಸುನಾಮಿ ಎಬ್ಬಿಸಿದ್ದ ಕಾರಣ ಕಾಂಗ್ರೆಸ್ ನಾಯಕರ ಎಲ್ಲಾ ಲೆಕ್ಕಾಚಾರ ತಲೆ ಕೆಳಗಾಗಿತ್ತು. ಅಲ್ಲದೆ ರಾಹುಲ್ ಗಾಂಧಿ ತಮ್ಮ ತವರು ಕ್ಷೇತ್ರ ಅಮೇಠಿಯಲ್ಲಿ ಸೋಲನ್ನು ಅನುಭವಿಸಿದರೆ, ಇನ್ನೊಂದೆಡೆ ಮೊದಲ ಬಾರಿಗೆ ಭಾರೀ ಪೈಪೋಟಿಯಿಂದ ರಾಯ್ ಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಜಯಸಾಧಿಸಿದರು.

ಈ ಎಲ್ಲಾ ವಿಚಾರವನ್ನು ಮನಗೊಂಡು ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸದ್ಯ ಕಾಂಗ್ರೆಸ್ ಪಕ್ಷ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಆದರೆ ಇಲ್ಲಯವರೆಗೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಅಭ್ಯರ್ಥಿಯ ಹೆಸರು ಫೈನಲ್ ಆಗಿಲ್ಲ. ಸದ್ಯ ಇನ್ನೊಂದೆಡೆ ಪ್ರಿಯಾಂಕ ಗಾಂಧಿ ಕೂಡಾ ರಾಜೀನಾಮೆ ನೀಡುವ ಯೋಚನೆಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.