ಕಮಲಹಾಸನ್ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ! ಕೃಷ್ಣಾದಲ್ಲಿ ಕಾವೇರಿ ಸಂಬಂಧ ಕುದುರಿಸಿದ ನಟ !!

 

ad

ತಮಿಳಿನ ಖ್ಯಾತ ನಟ ಹಾಗೂ ತಮಿಳುನಾಡಿನಲ್ಲಿ ಮಕ್ಕಳ್ ನೀಧಿ ಮಯಾಮ್ ಪಕ್ಷವನ್ನು ಸ್ಥಾಪಿಸಿರುವ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಬೆಳಿಗ್ಗೆ 11:30 ಕ್ಕೆ ಸಿಎಂ‌ ಬೇಟಿಗೆ ಕಮಲಹಾಸನ್ ಬಂದಿದ್ದರು. ನ್ಯಾಶನಲ್ ಕಾಲೇಜು ಕಾರ್ಯಕ್ರಮದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಇಬ್ಬರ ಮಹತ್ವದ ಭೇಟಿಯಾಯಿತು. ಭೇಟಿ ಸಂದರ್ಭದಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ವಿಚಾರ, ಕಾವೇರಿ ನೀರು ಹಂಚಿಕೆ, ರಾಜ್ಯದಲ್ಲಿ ತಮಿಳು ಸಿನಿಮಾ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಭೇಟಿ ಬಳಿಕ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, “ತಮಿಳುನಾಡು ಮತ್ತು ಕರ್ನಾಟಕದ ನಡುವೆ ಸೌಹಾರ್ದಯುತ ವಾತಾವಣ ಮೂಡಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ” ಎಂದರು.

 

“ನಾವು ಮತ್ತು ಕರ್ನಾಟಕದ ಜನ ಸಹೋದರರೇ ತಾನೆ? ಕಾವೇರಿ ಇಲ್ಲದೆ ಎರಡೂ ರಾಜ್ಯಗಳ ಜನತೆ ಬದುಕಲು ಸಾಧ್ಯವಿಲ್ಲ. ಹಾಗಾಗಿಯೇ ಕಾವೇರಿ ವಿವಾದ ಕುರಿತಂತೆಯೂ ಚರ್ಚಿಸಿದ್ದೇವೆ. ಕುಮಾರಸ್ವಾಮಿಯವರ ಮಾತಿನಿಂದ ಹೃದಯ ತುಂಬಿ ಬಂದಿದೆ” ಎಂದು ಕಮಲಹಾಸನ್ ಹೇಳಿದರು.ಜಂಟಿ ಪತ್ರಿಕಾಗೋಷ್ಠಿ ಮಾಧರಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಕಾವೇರಿ ವಿವಾದ ಇಂದು ನಿನ್ನೆಯದಲ್ಲ. ಎರಡೂ ರಾಜ್ಯಗಳ ರೈತರ ನಡುವೆ ಕಾವೇರಿ ನೀರು ಹಂಚಿಕೆಯಾಗಬೇಕು. ಈ ಸಂಬಂಧ ತಮಿಳುನಾಡು ಸರ್ಕಾರದ ಜತೆಯೂ ಮಾತುಕತೆಗೆ ನಾನು ಸಿದ್ದ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನವಾಗಿ ಹೋಗಬೇಕು ಎಂದರು. ಕುಮಾರಸ್ವಾಮಿ ಮಾತಿನ ಬಳಿಕ ಮತ್ತೆ ಕಮಲ್ ಹಾಸನ್ ಮಾತನಾಡಿ, ”  ವಿವಾದದ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿಲ್ಲ. ಅದಕ್ಕಾಗಿ ವಾಣಿಜ್ಯ ಮಂಡಳಿ ಇದೆ. ಅವರು ನೋಡಿಕೊಳ್ಳುತ್ತಾರೆ. ನಾನು ತಮಿಳುನಾಡು ಜನತೆಯ ಪರವಾಗಿ ಬಂದಿದ್ದೇನೆ. ಕುರುವೈ ಬೆಳೆಗೆ ನೀರು ಬೇಕು. ಅದಕ್ಕಾಗಿ ಜನರಿಗಾಗಿ ಸೇತುವೆ, ಅಳಿಲು ಕೊನೆಗೆ ಜನರ ಚಪ್ಪಲಿಯಾಗಲೂ ಸಿದ್ದ. ನಮ್ಮದು ಚಿಕ್ಕ ಪಕ್ಷ. ತಮಿಳು ನಾಡು ಜನತೆಗಾಗಿ ನಾನು ಕರ್ನಾಟಕ-ತಮಿಳುನಾಡು ಸರ್ಕಾರಗಳ ನಡುವೆ ಮಧ್ಯಸ್ಥಿಕೆಗೆ ನಾನು ಸಿದ್ದ. ನಮ್ಮಕುಟುಂಬದಲ್ಲೂ ವಕೀಲರಿದ್ದಾರೆ. ಎಲ್ಲರೂ ಸಹ ಕಾವೇರಿ ವಿವಾದ ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳಬೇಕೆಂದೆ ಸಲಹೆ ನೀಡಿದ್ದಾರೆ ಎಂದರು.