ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಬಂಧನ!! ಖರ್ಗೆ ತೀವ್ರ ಆಕ್ರೋಶ

ಐಎನ್​​ಎಕ್ಸ್​ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಲಂಡನ್​ನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಮನಿ ಲಾಂಡರಿಂಗ್​​ ಪ್ರಕರಣದಲ್ಲಿ ಭಾಗಿಯಾಗಿರುವ ಕಾರಣದಿಂದ ಕಾರ್ತಿಯನ್ನು ಬಂಧಿಸಲಾಗಿದೆ.

ad


ಸಿಬಿಐ, ಜಾರಿ ನಿರ್ದೇಶನಾಲಯದಿಂದ ಐಎನ್​​ಎಕ್ಸ್​ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಯನ್ನು ಅರೆಸ್ಟ್​ ಮಾಡಿ ತನಿಖೆ ನಡೆಸಲಾಗುತ್ತಿದೆ. ಚೆನ್ನೈನಲ್ಲಿ ಕಾರ್ತಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ದೆಹಲಿಗೆ ಕರೆದೊಯ್ಯುತ್ತಿದ್ದು, ಪಟಿಯಾಲಾ ಕೋರ್ಟ್​ಗೆ ಇಂದು ಮಧ್ಯಾಹ್ನ 2.30ರ ಸುಮಾರಿಗೆ ಹಾಜರುಪಡಿಸುವ ಸಾಧ್ಯತೆ ಇದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ಇನ್ನು ಐವತ್ತು ದಿನದಲ್ಲಿ ಕರ್ನಾಟಕದಲ್ಲಿ ಚುನಾವಣೆ ಇರುವಾಗ ಕಾರ್ತಿಯನ್ನು ಬಂಧಿಸಿರುವುದು ಸೇಡಿನ ಕ್ರಮ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಈ ಕುತಂತ್ರ, ಈ ಹಿಂದೆ ಇಂದಿರಾಗಾಂಧಿ ಅವರಿಗೂ ಇದೇ ರೀತಿ ಕಿರುಕುಳ ನೀಡಿದ್ರು, ಇವರು ಎಷ್ಟು ತೊಂದರೆ ಕೊಡ್ತಾರೋ ಕಾಂಗ್ರೆಸ್ ಗೆ ಅಷ್ಟು ಒಳ್ಳೆಯದು ಎಂದು ಆಕ್ರೋಶ ವ್ಯಕ್ತಪಡಿಸಿದರು.