K’taka govt denies aid to schools run by RSS leader, parents and students protest in Bantwal | ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ರ ಎರಡು ಶಿಕ್ಷಣ ಸಂಸ್ಥೆಗಳ ಅನುದಾನ ರದ್ದು ಪಡಿಸಿರೋದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

0
8

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ರ ಎರಡು ಶಿಕ್ಷಣ ಸಂಸ್ಥೆಗಳ ಅನುದಾನ ರದ್ದು ಪಡಿಸಿರೋದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ ಆದೇಶದ ವಿರುದ್ದ ಮಂಗಳೂರಿನ ಬಿ.ಸಿ.ರೋಡ್‌ನಲ್ಲಿ ವಿದ್ಯಾರ್ಥಿಗಳ ಪೋಷಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಕಲ್ಲಡ್ಕ ಪ್ರಭಾಕರ ಭಟ್‌ರ ಶ್ರೀರಾಮ ವಿದ್ಯಾಕೇಂದ್ರ ಮತ್ತು ಪುಣಚ ಗ್ರಾಮದ ಶ್ರೀದೇವಿ ವಿದ್ಯಾಕೇಂದ್ರಕ್ಕೆ ದತ್ತು ಯೋಜನೆಯ ಅಡಿ ಅನುದಾನ ಬರ್ತಿತ್ತು. ಇದನ್ನು ಶಿಕ್ಷಣ ಸಂಸ್ಥೆಯ ಮಧ್ಯಾಹ್ನದ ಮಕ್ಕಳ ಬಿಸಿಯೂಟಕ್ಕೆ ಬಳಕೆ ಮಾಡಲಾಗುತ್ತಿತ್ತು. ಆದ್ರೆ ಕಲ್ಲಡ್ಕ ಭಟ್ ವಿರುದ್ದ ಸೇಡಿನ ರಾಜಕಾಣಕ್ಕೆ ಇಳಿದಿರೋ ಸಿಎಂ ಸಿದ್ದರಾಮಯ್ಯ ಸರ್ಕಾರ ಕೆಲ ದಿನಗಳ ಹಿಂದಷ್ಟೇ ಅನುದಾನವನ್ನ ರದ್ದು ಮಾಡಿ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಆದೇಶ ಹೊರಡಿಸಿದ್ದರು. ಹೀಗಾಗಿ ಬಿ.ಸಿ.ರೋಡ್‌ನಲ್ಲಿರೋ ಬಂಟ್ವಾಳ ತಾಲೂಕು ಕಚೇರಿ ಮುಂಭಾಗದಲ್ಲಿ ಮಕ್ಕಳ ಪೋಷಕರು ಮತ್ತು ಸಾರ್ವಜನಿಕರು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here