ಸಾಲು-ಸಾಲು ರಾಜೀನಾಮೆ ಹಿನ್ನೆಲೆ! ಕಾನೂನು ಸಲಹೆ ಮೊರೆ ಹೋದ ಸ್ಪೀಕರ್ ಮತ್ತು ರಾಜ್ಯಪಾಲರು!!

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ 14 ಜನ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಇಬ್ಬರು ಪಕ್ಷೇತರರು ತಮ್ಮ ಬೆಂಬಲ ವಾಪಸ್ ಪಡೆದಿದ್ದಾರೆ, ಸರ್ಕಾರಕ್ಕೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ  ರಾಜ್ಯಪಾಲರು ಕಾನೂನು ಸಲಹೆ ಪಡೆದುಕೊಂಡಿದ್ದು ಕುತೂಹಲ ಮೂಡಿಸಿದೆ.

ad

ಕುಮಾರಸ್ವಾಮಿ ಸರ್ಕಾರದ ಎಲ್ಲ  ಸಚಿವರ ರಾಜೀನಾಮೆ ಹಿನ್ನೆಲೆಯಲ್ಲಿ ಮುಂದೆ ಅನುಸರಿಸಬೇಕಾದ ಸಂವಿಧಾನಾತ್ಮಕ ಕ್ರಮಗಳ ಬಗ್ಗೆ ರಾಜ್ಯಪಾಲ ವಿ.ಆರ್‌. ವಾಲಾ ಹೈಕೋರ್ಟ್‌ ಅಡಿಷನಲ್‌ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ನಾವಡಗಿ ಅವರ ಜೊತೆ  ಚರ್ಚೆ ನಡೆಸಿದ್ದಾರೆ.

ಇನ್ನು ಶಾಸಕರ ರಾಜೀನಾಮೆಗಳ ಬಗ್ಗೆಯೂ ಕಾನೂನು ಸಲಹೆ ಪಡೆದು ಚಿಂತನೆ ನಡೆಸೋದಾಗಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಇನ್ನು ಸ್ಪೀಕರ್  ರಾಜೀನಾಮೆ ಅಂಗೀಕರಿಸುತ್ತಾರೋ ಅಥವಾ ಮತದಾರರ ಅಭಿಪ್ರಾಯ ಪಡೆದು ನಿರ್ಧರಿಸುತ್ತಾರೋ ಇನ್ನೂ ಸ್ಪಷ್ಟವಾಗಿಲ್ಲ. ಒಂದು ವೇಳೆ ಅಂಗೀಕಾರವಾದರೆ ಸಹಜವಾಗಿ ಸರ್ಕಾರದ ಬಹುಮತ ಕಳೆದುಕೊಳ್ಳುತ್ತದೆ.