ವೀರಶೈವರಿಗೆ ಪೆಟ್ಟು !! ಸಂಭ್ರಮಾಚರಣೆಯಲ್ಲಿ ಲಿಂಗಾಯತರು !! ಉತ್ತರ ಕರ್ನಾಟಕದಲ್ಲಿ ಸಂಘರ್ಷಕ್ಕೆ ಕಾರಣವಾದ ಸರಕಾರದ ನಿರ್ಧಾರ !!

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅತ್ತ ತೀರ್ಮಾನ ಕೈಗೊಳ್ಳುತ್ತಿದ್ದಂತೆ ಲಿಂಗಾಯತರು ಸಂಭ್ರಮಾಚರಣೆ ಮಾಡಿದರೆ, ವೀರಶೈವರು ಚಪ್ಪಲಿ ಹಿಡಿದು ಪ್ರತಿಭಟಿಸಿದರು. ಇದು ಸಂಘರ್ಷಕ್ಕೂ ಕಾರಣವಾಯ್ತು.

ಇಂದು ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆಯ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆ ಸೆಕ್ಷನ್ 2(ಡಿ)ಅಡಿಯಲ್ಲಿ ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡಲು ಶಿಫಾರಸು ಮಾಡಲಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ನೀಡಿರುವ ಪ್ರತ್ಯೇಕ ಲಿಂಗಾಯತ ಧರ್ಮದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ರಂಭಾಪುರಿ ಶ್ರೀಗಳು ಮನವಿ ಮಾಡಿದ್ದರು.

ಕರ್ನಾಟಕದ ಜನಸಂಖ್ಯೆಯಲ್ಲಿ ಶೇಖಡ 17ರಷ್ಟು ಲಿಂಗಾಯತ ಸಮುದಾಯವಿದ್ದು ರಾಜ್ಯ ರಾಜಕೀಯದಲ್ಲಿ ಈ ಸಮುದಾಯ ನಿರ್ಣಾಯಕರಾಗಿದ್ದರು. ಇದೀಗ ಲಿಂಗಾಯತರನ್ನು ವಿಭಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಆಗ್ತಿದ್ದಂತೆ ಕಲಬುರ್ಗಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿರುವ ನಿರ್ಣಯ ಖಂಡಿಸಿ ಮುಖ್ಯಮಂತ್ರಿ ಮತ್ತು ಸಚಿವ ಎಂ.ಬಿ.ಪಾಟೀಲ, ಶರಣಪ್ರಕಾಶ ಪಾಟೀಲರ ಪ್ರತಿಕೃತಿಗಳಿಗೆ ಚಪ್ಪಲಿ ತೋರಿಸಿ ಪ್ರತಿಭಟನೆ ನಡೆಸಲಾಯ್ತು. ಅಲ್ದೆ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯ್ತು. ರಾಜ್ಯ ಸರ್ಕಾರದ ಶಿಫಾರಸ್ಸನ್ನ ಕೇಂದ್ರ ಸರ್ಕಾರ ತಿರಸ್ಕರಿಸಲು ಒತ್ತಾಯ ಮಾಡಲಾಯ್ತು. ಈ ಸಂಧರ್ಭ ವೀರಶೈವ ಮುಖಂಡನೊಬ್ಬನನ್ನು ಲಿಂಗಾಯತರು ಹಿಡಿದು ಹೊಡೆಯುತ್ತಿರುವ ದೃಶ್ಯ ವೈರಲ್ ಆಗಿದೆ.