ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಮೇಲೆ ಚಾಕು ಇರಿತ- ಲೋಕಾಯುಕ್ತ ಕಚೇರಿಯಲ್ಲೇ ನಡೆಯಿತು ದುರ್ಘಟನೆ!

Lokayuktha Justice Vishwanath Shetty Stabbed in Bengaluru Office.

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರಿಗೆ ವ್ಯಕ್ತಿಯೊರ್ವ ಕಚೇರಿಯಲ್ಲೇ ಚಾಕು ಇರಿದಿದ್ದು, ತೀವ್ರವಾಗಿ ಗಾಯಗೊಂಡಿರುವ ವಿಶ್ವನಾಥ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆ ದಾಖಲಿಸಲಾಗಿದೆ.

ad


ಚಾಕು ಇರಿದ ಆರೋಪಿ ತೇಜೆಶ್​ ಶರ್ಮಾ ಎಂಬಾತನನ್ನು ವಿಧಾನಸೌಧ ಭದ್ರತಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಮಧ್ಯಾಹ್ನ 12.45 ರ ವೇಳೆಗೆ ಲೋಕಾಯುಕ್ತ ಕಚೇರಿಗೆ ಬಂದ ತುಮಕೂರು ಮೂಲದ ತೆಜೇಶ್​ ಗೌಡ್​​ ಎಂಬಾತ ಪ್ರಕರಣವೊಂದರ ವಿಚಾರಣೆಗಾಗಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರ ಚೇಂಬರ್​ಗೆ ಆಗಮಿಸಿದ್ದ. ಈ ವೇಳೆ ಏಕಾಏಕಿ ತೇಜೇಶ್ ಶರ್ಮಾ ವಿಶ್ವನಾಥ ಶೆಟ್ಟಿಯವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ಎದೆ,ಹೊಟ್ಟೆ,ಪಕ್ಕೆಲುಬು ಸೇರಿದಂತೆ 6 ಕಡೆ ಚಾಕು ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಲೋಕಾಯುಕ್ತರನ್ನು ವೀಲ್ಹ್​ ಚೇರ್​ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ, ಸಚಿವ. ಕೆ.ಜೆ ಜಾರ್ಜ್​, ಸಚಿವ ಎಂ.ಬಿ.ಪಾಟೀಲ್​, ಡಿಜಿಐಜಿಪಿ ನೀಲಮಣಿ ರಾಜು ಸೇರಿದಂತೆ ಹಲವರು ಮಲ್ಯ ಆಸ್ಪತ್ರೆಗೆ ಧಾವಿಸಿದ್ದು, ವಿಶ್ವನಾಥ ಶೆಟ್ಟಿ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದಾರೆ. ಭೇಟಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ವಿಶ್ವನಾಥ ಶೆಟ್ಟಿಯವರ ಮೇಲೆ ಚಾಕು ಇರಿತವಾಗಿದೆ. ಈಗ ಆರೋಗ್ಯ ಸ್ಥಿರವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನು ಗೃಹ ಸಚಿವ ರಾಮಲಿಂಗಾ ರೆಡ್ಡಿ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಹಲ್ಲೆ ಮಾಡಿದ ಆರೋಪಿ ತೆಜೇಶ್ ಶರ್ಮಾ ಆರ್.ಟಿ.ಐ ಕಾರ್ಯಕರ್ತನಾಗಿದ್ದು, ಟೆಂಡರ್​ ವಿಚಾರವೊಂದಕ್ಕೆ ಕುರಿತಂತೆ ಆಕ್ರೋಶದಿಂದ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಚಾರಣೆ ನಡೆದಿದ್ದು, ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ ಎಂದಿದ್ದಾರೆ. ಒಟ್ಟಿನಲ್ಲಿ ಮಟ-ಮಟ ಮಧ್ಯಾಹ್ನ ಭದ್ರತೆ ಇರುವ ಲೋಕಾಯುಕ್ತ ಕಚೇರಿಯಲ್ಲೇ ಲೋಕಾಯುಕ್ತರ ಮೇಲೆ ಹಲ್ಲೆ ನಡೆದಿರೋದು ರಾಜ್ಯದಲ್ಲಿ ಯಾರಿಗೂ ರಕ್ಷಣೆ ಇಲ್ಲವೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.