ಚುಡಾಯಿಸುತ್ತಿದ್ದವನಿಗೆ ಬಿತ್ತು ಸಖತ್ ಗೂಸಾ- ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಮಹಿಳೆಯರು!

 

ad

ಪ್ರತಿನಿತ್ಯ ರಸ್ತೆ ಬದಿಯಲ್ಲಿ ನಿಂತು ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ಸ್ಥಳೀಯರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರದ ಎಲ್​ಐಸಿ ರಸ್ತೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಜಾವೇದ್​ ಎಂಬಾತನೇ ಈ ಧರ್ಮದೇಟು ತಿಂದ ವ್ಯಕ್ತ ಕುಂದಾಪುರದ ಎಲ್​ಐಸಿ ರಸ್ತೆಯಲ್ಲಿ ನಿಲ್ಲುತ್ತಿದ್ದ ಈತ ಹೋಗಿ ಬರುವ ಹೆಣ್ಣುಮಕ್ಕಳನ್ನು ಚುಡಾಯಿಸುತ್ತಿದ್ದ.

 

 

ಅಲ್ಲದೇ ಕೆಲವರ ಬಳಿ ಅಸಭ್ಯವಾಗಿ ವರ್ತಿಸಿದ್ದ ಇದರಿಂದ ಕೆರಳಿದ ಮಹಿಳೆಯರು ಇಂದು ಈತನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯರನ್ನು ಸಮಾಧಾನ ಮಾಡಿ ಈತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.