ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಕ್ಕೆ ಬಾಗಲಕೋಟೆಯಲ್ಲಿ ಫುಲ್ ಖುಷ್, ಅವರಲ್ಲೇ ಆಕ್ರೋಶ!! ಆಕ್ರೋಶ ಯಾಕೆ?

ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ ವಚನ…

ಬಾಗಲಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ….

ಕಾಂಗ್ರೆಸ್ ಜೊತೆ ಜೆಡಿಎಸ್ ಕೈಜೋಡಿಸಿದ್ದಕ್ಕೆ ಆಕ್ರೋಶ…

ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಾಗಲಕೋಟೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಪಕ್ಷದ ಕಾರ್ಯಾಲಯದಿಂದ ಮೆರವಣಿಗೆ ಮೂಲಕ ನಗರದ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ಪಕ್ಷದ ಪರವಾಗಿ ಜೈಕಾರ ಕೂಗಿದರು.

ಬಿಜೆಪಿ ಅಧಿಕಾರಕ್ಕೆ ಬಂದಿದ್ದಕ್ಕೆ ಭಾರಿ ಪ್ರಮಾಣದಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ರಾಜ್ಯದ ಜನರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. 104 ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ಅಧಿಕಾರದಲ್ಲಿ ಉಳಿಯಲು ಬರೀ 38 ಸ್ಥಾನ ಪಡೆದಿರುವ ಜೆಡಿಎಸ್ ಜೊತೆ ಕೈಜೋಡಿಸಲು ಮುಂದಾಗಿದ್ದಾರೆ. ಎರಡು ಪಕ್ಷ ಅನೈತಿಕ ಒಪ್ಪಂದ ಮಾಡಿಕೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

 

ಪ್ರತ್ಯುತ್ತರ ನೀಡಿ

Please enter your comment!
Please enter your name here