ಆಳ್ವಾಸ್​​ನಲ್ಲಿ ಮತ್ತೊರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು- ಪಾಲಕರಲ್ಲಿ ಆತಂಕ ಮೂಡಿಸಿದ ಆತ್ಮಹತ್ಯೆಸರಣಿ

ಮಂಗಳೂರಿನ ಆಳ್ವಾಸ್​​ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನ ಅಬ್ಬಿಗೆರೆ ಮೂಲದ ತೇಜೇಸ್​ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಆಳ್ವಾಸ್​​ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ತೇಜೆಸ್​​ ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ಆತನ ಹುಟ್ಟುಹಬ್ಬವಾಗಿದ್ದು, ಹುಟ್ಟುಹಬ್ಬದ ದಿನದಂದೇ ತೇಜೆಸ್​ ಆತ್ಮಹತ್ಯೆಗೆ ಶರಣಾಗಿದ್ದು ಮಾತ್ರ ದುರ್ದೈವವೇ ಸರಿ. ಬೆಂಗಳೂರಿನ ಅಬ್ಬಿಗೆರೆ ಮೂಲದ ತೇಜೆಸ್​ ನಿನ್ನೆ ಮನೆಗೆ ಹಾಗೂ ಸ್ನೇಹಿತರಿಗೆ ಪೋನ್ ಕರೆ ಮಾಡಿ ಮಾತನಾಡಿದ್ದ ಎನ್ನಲಾಗಿದೆ. ತೆಜೇಸ್​ ತಾಯಿ ತೆಜೇಸ್​ ಚಿಕ್ಕವಯಸ್ಸಿನಲ್ಲಿದ್ದಾಗಲೇ ಸಾವನ್ನಪ್ಪಿದ್ದು. ತೆಜೇಸ್ ತಂದೆ ಎರಡನೇ ಮದುವೆಯಾಗಿದ್ದರು ಎನ್ನಲಾಗಿದೆ.

 

ಇನ್ನು ಸಾಯುವ ಕೆಲವೇ ಗಂಟೆಗಳ ಮೊದಲು ತೇಜೇಸ್​ ಪೇಸ್​ಬುಕ್​ನಲ್ಲಿ ತುಂಬ ಭಾವನಾತ್ಮಕವಾದ ಸ್ಟೇಟಸ್​ ಹಾಕಿದ್ದಾನೆ. ಬಹುಷಃ ಮಾನಸಿಕ ಕಿನ್ನತೆಯಿಂದ ತೆಜೇಸ್ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಮೂಡಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೂಡಬಿದಿರೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಸೋಷಿಯಲ್​ ಮೀಡಿಯಾ ಸೇರಿದಂತೆ ಎಲ್ಲೆಡೆ ಮತ್ತೆ ಆಳ್ವಾಸ್ ಶಿಕ್ಷಣ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಕಳೆದ ಒಂದೇ ವರ್ಷದಲ್ಲಿ ಇಲ್ಲಿನ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಆಳ್ವಾಸ ಶಿಕ್ಷಣ ಸಂಸ್ಥೆ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.