ಸಿಎಂ ತವರಲ್ಲೆ ಮೋದಿ ಬಿಡುಗಡೆ ಮಾಡಲಿದ್ದಾರೆ ೧೦ ಪರ್ಸೆಂಟ್ ದಾಖಲೆ- ಇದು ಬಿಜೆಪಿ ರಣತಂತ್ರ!!

ರಾಜ್ಯ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸಮರ ಸಾರಿದಂತಿದೆ. ಮೊನ್ನೆಯಷ್ಟೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಕಾಂಗ್ರೆಸ್​ ರಾಜ್ಯದಲ್ಲಿ ನಡೆಸುತ್ತಿರುವ ಭ್ರಷ್ಟಾಚಾರವನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದರು.

 ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲೇ ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜಾಗಿದ್ದು, ಸಿಎಂ ಭಷ್ಟಾಚಾರದ ದಾಖಲೆಯನ್ನು ಮೋದಿ ಎದುರಿನಲ್ಲೇ ಬಿಡುಗಡೆ ಮಾಡಲಿದ್ದಾರೆ. ಹೌದು ಮೈಸೂರಿನಲ್ಲಿ ಇದೇ ಫೆ 19 ರಂದು ನರೇಂದ್ರ ಮೋದಿಯವರ ಮಹಾ ರ್ಯಾಲಿ ನಡೆಯಲಿದೆ. ಸಿಎಂ ಸಿದ್ದರಾಮಯ್ಯನವರ ಹಾಗೂ ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮೈಸೂರಿನಲ್ಲಿ ರ್ಯಾಲಿ ಸಜ್ಜುಗೊಳಿಸಲಾಗಿದೆ. ಪರಿವರ್ತನಾ ರ್ಯಾಲಿಯಲ್ಲಿ ರಾಜ್ಯ ಸರ್ಕಾರವನ್ನು 10 ಪರ್ಸೆಂಟ್​ ಸರ್ಕಾರವೆಂದು ಟೀಕಿಸಿದ್ದರು.

 

ಈ ಹಿನ್ನೆಲೆಯಲ್ಲಿ ದಾಖಲೆಗಳಿದ್ದರೇ ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಬಹಿರಂಗ ಸವಾಲು ಹಾಕಿದ್ದರು. ಸಿಎಂ ಸಿದ್ದು ಪಂಥಾಹ್ವಾನ ಸ್ವೀಕರಿಸಿರುವ ಬಿಜೆಪಿ ರ್ಯಾಲಿ ಆಯೋಜಿಸಿದ್ದು, ಅದೇ ವೇದಿಕೆಯಲ್ಲೇ ದಾಖಲೆ ಬಿಡುಗಡೆ ಮಾಡಲಿದೆ. ಈಗಾಗಲೇ ಸಮಾರಂಭಕ್ಕೆ 1 ಲಕ್ಷ ಕಾರ್ಯಕರ್ತರನ್ನು ಸಂಘಟಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದ್ದು, ಪ್ರಧಾನಿ ಮೋದಿ ಸೂಚನೆ ಮೇರೆಗೆ ಅಮಿತ್ ಶಾ ಹಾಗೂ ಇತರ ಬಿಜೆಪಿ ನಾಯಕರು ಸಿದ್ಧತೆಯಲ್ಲಿ ತೊಡಗಿದ್ದಾರೆ. ಒಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯ ತವರಿನಲ್ಲೇ ಮುಜುಗರ ಉಂಟು ಮಾಡಲು ಬಿಜೆಪಿ ರಣಕಹಳೆ ಮೊಳಗಿಸಿದೆ.