ನೂತನ ಸಿಎಂರಿಂದ ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್​- ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಖಡಕ್ ಆದೇಶ!

 

ad

ರಾಜ್ಯದಲ್ಲಿರುವ ಪೊಲೀಸ್ ಇಲಾಖೆ ರಾಜಕೀಯ ಹಸ್ತಕ್ಷೇಪಗಳಿಗೆ ಒಳಗಾಗದೇ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವಂತೆ ನೂತನ ಸಿಎಂ ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

 

ವಿಧಾನಸೌಧದಲ್ಲಿ ರಾಜ್ಯ ಪ್ರಮುಖ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಕುಮಾರಸ್ವಾಮಿ ಸಭೆಯಲ್ಲಿ ಅಧಿಕಾರಿಗಳ ಜೊತೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ತಾನು ಯಾವುದೇ ರೀತಿಯಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ. ಆದರೇ ರಾಜಧಾನಿಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಕೃತ್ಯಗಳು ನಡೆಯದಂತೆ ಕಾಳಜಿ ವಹಿಸಿ ಎಂದು ಆದೇಶಿಸಿದ್ದಾರೆ. ಇದೇ ವೇಳೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ನೀಲಮಣಿ ರಾಜು, ರಾಜ್ಯದಲ್ಲಿ ಮಕ್ಕಳ ಅಪಹರಣ ಕುರಿತು ವದಂತಿ ಇಂದ ಸೃಷ್ಟಿಯಾಗಿರುವ ಆತಂಕ ಹಾಗೂ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಈ ವೇಳೆ ಮುಖ್ಯಕಾರ್ಯದರ್ಶಿ ರತ್ನಪ್ರಭಾ,ಎಂ.ಎನ್.ರೆಡ್ಡಿ,ಸುನೀಲ್ ಕುಮಾರ್ ಸೇರಿ ಹಲವರು ಪಾಲ್ಗೊಂಡಿದ್ದರು.