ಒಕ್ಕಲಿಗ ಸಮುದಾಯದ ಸಿಟ್ಟಿಂಗ್​​ ‘ಎಂಪಿ’ಗೆ ಟಿಕೆಟ್ ತಪ್ಪಿಸಿದ್ದಕ್ಕೆ ‘ಮಾಜಿ ಸಿಎಂ ಸಿದ್ದು ವಿರುದ್ಧ ಆಕ್ರೋಶ…!

ಬೆಂಗಳೂರಿನಲ್ಲಿ ಒಕ್ಕಲಿಗ ಮುಖಂಡರೊಬ್ಬರ ನಿವಾಸದಲ್ಲಿ ನಿನ್ನೆ ತಡೆರಾತ್ರಿವರೆಗೂ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಒಕ್ಕಲಿಗ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ರಾಮನಗರ ಮಂಡ್ಯ ಮೈಸೂರು, ಹಾಸನ,ತುಮಕೂರಿನ ಒಕ್ಕಲಿಗ ಮುಖಂಡರು ಪಾಲ್ಗೊಂಡಿದ್ದರು.

ತುಮಕೂರಿನಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸಿರುವುದು ಸಿದ್ದರಾಮಯ್ಯ. ಮತ್ತೊಂದೆಡೆ ಮೈಸೂರನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದರೆ ಒಕ್ಕಲಿಗ ಸಮುದಾಯದ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯುತ್ತಿದ್ದರು. ಆದರೆ ಎರಡೂ ಕ್ಷೇತ್ರದಲ್ಲೂ ಸಿದ್ದರಾಮಯ್ಯ ಒಕ್ಕಲಿಗರ ವಿರುದ್ಧ ಅನ್ಯಾಯ ಮಾಡಿದ್ದಾರೆ.

ಆದ್ದರಿಂದ ಈ ಬಗ್ಗೆ ಯಾವ ಕ್ರಮ ಕೈಗೊಳ್ಳಬೇಕು ಎಂದು ಚರ್ಚೆ ನಡೆಯಿತು. ಹಲವು ಮುಖಂಡರು ಸಿದ್ಧರಾಮಯ್ಯನವರ ಒಕ್ಕಲಿಗರ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು. ಮೂರ್ನಾಲ್ಕು ದಿನದ ನಂತರ ಮೈಸೂರಿನಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಟಿವಿಗೆ ಒಕ್ಕಲಿಗ ಮುಖಂಡರೊಬ್ಬರು ತಿಳಿಸಿದ್ದಾರೆ.