ಒಪಿಡಿ ಬಂದ್ ಮಾಡಿ ಖಾಸಗಿ ವೈದ್ಯರ ಮುಷ್ಕರ !! ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ !!

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಇಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿದೆ.

ad


ಮುಷ್ಕರ ಬೆಂಬಲಿಸಿ ರಾಜ್ಯದ ಸುಮಾರು 15 ಸಾವಿರ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ಚಿಕಿತ್ಸಾ ವಿಭಾಗ ಒಪಿಡಿ ಬಂದ್ ಮಾಡಲು ಐಎಂಎ ಕರ್ನಾಟಕ ಶಾಖೆ ನಿರ್ಧರಿಸಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹೊರರೋಗಿ ಚಿಕಿತ್ಸಾ ವಿಭಾಗ (ಒಪಿಡಿ) ಕಾರ್ಯನಿರ್ವಹಿಸುವುದಿಲ್ಲ. ಆದರೆ, ತುರ್ತು ಚಿಕಿತ್ಸಾ ಸೌಲಭ್ಯ, ಔಷಧಿ ಅಂಗಡಿಗಳು ಮತ್ತು ಒಳರೋಗಿ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಬೆಂಗಳೂರಿನಲ್ಲೂ ಐಎಂಎ ನೋದಾಯಿತ ಆಸ್ಪತ್ರೆಗಳು ಬಂದ್​ಗೆ ಸಾಥ್​ ನೀಡಿವೆ. ಫನಾ ಅಡಿಯಲ್ಲಿ ಬರುವ ಆಸ್ಪತ್ರೆಗಳು ನೈತಿಕ ಬೆಂಬಲ ನೀಡಿದ್ದು ಎಂದಿನಂತೆ ಓಪನ್ ಆಗಿವೆ.

ಕಿಮ್ಸ್​ ಸೇರಿದಂತೆ ಕೆಲ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆಗೆ ಯಾವುದೇ ಅಡ್ಡಿ ಆಗಿಲ್ಲ. ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪಿಸುವ ಮಸೂದೆ ಕಳೆದ ಶುಕ್ರವಾರ ಲೋಕಸಭೆಯಲ್ಲಿ ಮಸೂದೆ ಮಂಡನೆ ಆಗಿತ್ತು.
ಮುಂದಿನ ನಾಲ್ಕು ದಿನ ಸಂಸತ್‌ನಲ್ಲಿ ಮಸೂದೆ ಮೇಲೆ ಚರ್ಚೆ ನಡೆಯಲಿದೆ.
ಮಸೂದೆಯನ್ನು ಮತ್ತೊಮ್ಮೆ ಪರಿಶೀಲನೆ ನಡೆಸಲು ಪಟ್ಟು ಹಿಡಿದು ಈಗ ವೈದ್ಯಕೀಯ ಸಂಸ್ಥೆಗಳು ಮುಷ್ಕರ ನಡೆಸುತ್ತಿದೆ.