ಹೈವೋಲ್ಟೇಜ್​​ ಕ್ಷೇತ್ರ ವಾರಣಾಸಿಯಲ್ಲಿ ಮೋದಿ ಎದುರಾಳಿ ಯಾರು ಗೊತ್ತಾ?!

ಲೋಕಸಭಾ ಚುನಾವಣೆ ಸಮರ ದೇಶದಲ್ಲಿ ಜೋರಾಗಿದೆ. ದೇಶದ ಅತ್ಯಂತ ಪ್ರತಿಷ್ಠೆಯ ಕಣವಾದ ಪ್ರಧಾನಿ ನರೇಂದ್ರ ಮೋದಿ ಅವರ ಸ್ವ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಉಹಾ ಪೋಹಾ ಗಳಿಗೆ ಇದೀಗ ‘ಕೈ’ ಪಕ್ಷ ತೆರೆ ಎಳೆದಿದೆ. ಪ್ರಧಾನಿ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು  ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲು ಅಜಯ್ ರಾಯ್ ಅವರನ್ನು ಕಣಕ್ಕಿಳಿಸಲಾಗಿದೆ.

ad

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ, ಪ್ರಿಯಾಂಕಾ ಪ್ರಧಾನಿ ವಿರುದ್ಧ ಸ್ಪರ್ಧಿಸಲು ಸಿದ್ಧರಿದ್ದಾರೆ. ಆದರೆ ಈ ಬಗ್ಗೆ ಪಕ್ಷದ ನಿರ್ಧಾರ ಅಂತಿಮ ಎಂದಿದ್ದರು.  ಈಗ ಅಜಯ್ ರಾಯ್ ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದ್ದು, ಈ ಮೂಲಕ ಪ್ರಿಯಾಂಕ ಸ್ಪರ್ಧೆ ಚರ್ಚೆಗೆ ಫುಲ್ ಸ್ಟಾಪ್ ಬಿದ್ದಂತಾಗಿದೆ.ಮೋದಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮೇಲ್ನೋಟಕ್ಕೆ ಅಷ್ಟೇನೂ ದೊಡ್ಡ ನಾಯಕರಂತೆ ಕಾಣುತ್ತಿಲ್ಲ.  ಆದರೆ ಅಜಯ್ ಅವರು ಎಲ್ಲ ಜನರೊಂದಿಗೆ ಸಂಪರ್ಕ ಹೊಂದಿರುವವರು.ಅನೇಕ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಅವರು, ವಾರಾಣಸಿಯಲ್ಲಿ ಸೂಕ್ತ ಅಭ್ಯರ್ಥಿ ಎಂಬುದು ಪಕ್ಷದ ಅಭಿಪ್ರಾಯ. ಸಮಗ್ರ ದೃಷ್ಟಿಕೋನದಿಂದ ಆಲೋಚಿಸಿ ಕಾಂಗ್ರೆಸ್ ಪಕ್ಷವು ಜನಸಾಮಾನ್ಯರ ನಾಯಕನನ್ನು ಆಯ್ಕೆ ಮಾಡಿದೆ,’’ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜಿವಾಲಾ ಹೇಳಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಅಜಯ್ ರಾಯ್ ಅವರು ಮೋದಿ ವಿರುದ್ಧ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು. ಪ್ರಧಾನಿ ಮೋದಿ ಅವರು 3.37 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿನಿಧಿಸುತ್ತಿದ್ದ  ಕ್ಷೇತ್ರಕ್ಕೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಲಾಗಿದ್ದು, ಗೋರಕ್ ಪುರದಿಂದ ಮಧುಸೂದನ್ ತಿವಾರಿ ಅವರನ್ನು ಕಣಕ್ಕೆ ಇಳಿಸಿದೆ.  ಮೇ 19 ವಾರಣಾಸಿ ಕ್ಷೇತ್ರಕ್ಕೆ ಚುನಾವಣೆ  ನಡೆಯಲಿದ್ದು, ಮೋದಿ ಏಪ್ರಿಲ್ 26 ರಂದು ನಾಮಪತ್ರ ಸಲ್ಲಿಸಲಿದ್ದಾರೆ.