ಬಿಜೆಪಿಯಿಂದ ಮತ್ತೊಬ್ಬ ಖಾವಿಧಾರಿ ಚುನಾವಣಾ ಕಣಕ್ಕೆ! ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್​ ರಣಕಹಳೆ!!

ಈಗಾಗಲೇ ಬಿಜೆಪಿಯಲ್ಲಿ ಒಬ್ಬ ಸನ್ಯಾಸಿ ಚುನಾವಣೆಯಲ್ಲಿ ಸ್ಪರ್ಧಿಸಿ ಅಧಿಕಾರದ ಗದ್ದುಗೆ ಹಿಡಿದ ಬೆನ್ನಲ್ಲೇ, ಇನ್ನೊಬ್ಬರು ಸನ್ಯಾಸಿನಿ ಚುನಾವಣಾ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. ಹೌದು ದೇಶದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವ  ಕ್ಷೇತ್ರಗಳ ಪೈಕಿ ಭೋಪಾಲ್‌ ​ಕೂಡಾ ಒಂದು. ಭೋಪಾಲ್‌ನ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧದ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಬಹುದು ಎಂಬ ಗೊಂದಲಗಳಿಗೆ ಇಂದು ತೆರೆ ಬಿದ್ದಿದೆ. ಮಾಲೆಗಾವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ  ಸಾಧ್ವಿ ಪ್ರಜ್ಞಾ ಸಿಂಗ್ ದಿಗ್ವಿಜಯ್ ಸಿಂಗ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ad

ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿಬರುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾ ಪ್ರಜ್ಞಾ ಸಿಂಗ್ ಬಿಜೆಪಿ ಟಿಕೆಟ್ ನೀಡಿದರೆ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದರು. ಅದರ ಬೆನ್ನಲ್ಲೇ  ಸಾಧ್ವಿ ಪ್ರಜ್ಞಾ ಸಿಂಗ್  ಇಂದು ನಾಮಪತ್ರಸಲ್ಲಿಸಿದ್ದಾರೆ.

ಈ ಹಿಂದೆ ಬಿಜೆಪಿ ನಾಯಕಿ, ಕೇಂದ್ರ ಸಚಿವೆ ಉಮಾಭಾರತಿ ಅವರು ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಾರೆ ಎನ್ನುವ ಉಹಾಪೋಹಗಳಿಗೆ ಸಧ್ಯ ತೆರೆಬಿದ್ದಿದೆ. ಅಲ್ಲದೆ ಪ್ರಜ್ಞಾ ಸಿಂಗ್ ಠಾಕೂರ್ “ಹಿಂದು ವಿರೋಧಿ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸುವುದು ನನ್ನ ಉದ್ದೇಶ ಈ ಮೂಲಕ ದೇಶದಲ್ಲಿ ರಾಷ್ಟ್ರವಾದವನ್ನು ಇನ್ನಷ್ಟು ಜಾಗೃತಗೊಳಿಸಲಾಗುವುದು ಎಂದಿದ್ದಾರೆ. ಸಾಧ್ವಿ ಪ್ರಜ್ಞಾ ಸಿಂಗ್​ರ ಸ್ಪರ್ಧೆ  ಎಲ್ಲೆಡೆ ಚರ್ಚೆ ಹುಟ್ಟುಹಾಕಿದೆ.