ಬಿಜೆಪಿಗೆ ಬರ್ತಿರೋ ಖ್ಯಾತ ಸ್ವಾಮೀಜಿ ಯಾರು ಗೊತ್ತಾ?

ಕರ್ನಾಟಕದಲ್ಲಿ ಚುನಾವಣೆಯ ಕಣ ರಂಗೇರುತ್ತಲೇ ಇದೆ. ಚುನಾವಣೆ ಆರಂಭವಾಗುತ್ತಿದ್ದಂತೆ ಬೇರೆ-ಬೇರೆ ಕ್ಷೇತ್ರದ ಗಣ್ಯರು ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಮುಂಧಾಗೋದು ಸಾಮಾನ್ಯ ಸಂಗತಿ.

ad

ಇದೀಗ ಈ ಸಾಲಿಗೆ ನಾಡಿನ ಪ್ರಖ್ಯಾತ ಸ್ವಾಮೀಜಿಯೊರ್ವರು ಸೇರ್ಪಡೆಯಾಗಿದ್ದು, ಅಂತಾರಾಷ್ಟ್ರೀಯ ಖ್ಯಾತಿಯ ಜ್ಯೋತಿಷಿ ಚಂದ್ರಶೇಖರ್​ ಗುರೂಜಿ ಸಧ್ಯದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದಲ್ಲಿ ವಾಸವಾಗಿರುವ ಚಂದ್ರಶೇಖರ್ ಗುರೂಜಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಮೂಡಬಿದಿರೆಯವರು. ಹೀಗಾಗಿ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಮೂಡಬಿದಿರೆ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಸ್ವಾಮೀಜಿ ಜೊತೆ ಮಾತನಾಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ಸೇರುವಂತೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಇನ್ನು ಈಗಾಗಲೇ ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿರುವ ಚಂದ್ರಶೇಖರ್ ಗುರೂಜಿ ಒಂದು ವಾರದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಮುಲ್ಕಿ ಮೂಡಬಿದಿರೆಯಲ್ಲಿ ಚಂದ್ರಶೇಖರ್ ಗುರೂಜಿ ಸಾಕಷ್ಟು ಪ್ರಭಾವ ಉಳಿಸಿಕೊಂಡಿದ್ದಾರೆ. ಸಧ್ಯ ಮುಲ್ಕಿ ಹಾಗೂ ಮೂಡಬಿದಿರೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಯಲ್ಲಿದ್ದು, ಸ್ವಾಮೀಜಿಯನ್ನು ಕಣಕ್ಕಿಳಿಸಿ ಇಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಉದ್ದೇಶದಿಂದ ಬಿಜೆಪಿ ನಾಯಕರು ಈ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಚುನಾವಣೆ ಆಗಮಿಸುತ್ತಿದ್ದಂತೆ ಎಲ್ಲರೂ ರಾಜಕೀಯ ಪಕ್ಷಗಳತ್ತ ಮುಖಮಾಡುತ್ತಿದ್ದು, ಈ ಸಾಲಿಗೆ ಚಂದ್ರಶೇಖರ್ ಗುರೂಜಿ ಸೇರುವ ಸಾಧ್ಯತೆ ದಟ್ಟವಾಗಿದೆ.