ಸೌಮ್ಯ ರೆಡ್ಡಿಗೆ ಒಲಿದ “ಜಯ” ನಗರ !! ಮೈತ್ರಿ ಸರಕಾರದ ಮೊದಲ ಗೆಲುವು !!

 

ad


 ಸಮ್ಮಿಶ್ರ ಸರಕಾರದ ರಚನೆಗೊಂಡ ಬಳಿಕ ನಡೆದ ಜಯನಗರ ವಿಧಾನಸಭಾ ಚುನಾವಣೆ 2018ರ ಫಲಿತಾಂಶ ಹೊರ ಬಿದ್ದಿದೆ. ಮಾಜಿ ಗೃಹ ಸಚಿವ ರಾಮ ಲಿಂಗಾ ರೆಡ್ಡಿಪುತ್ರಿ ಸೌಮ್ಯ ರೆಡ್ಡಿ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಜಯ ದಾಖಲಿಸಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ಕಡಿಮೆ ಅಂತರದಲ್ಲಿ ಸೌಮ್ಯ ರೆಡ್ಡಿ ಗೆಲುವು ಸಾಧಿಸಿದರು.ಅವರಿಗೆ ತೀವ್ರ ಸ್ಪರ್ಧೆಯೊಡ್ಡಿದ ಬಿಜೆಪಿಯ ಬಿ.ಎನ್. ಪ್ರಹ್ಲಾದ್ 51,568 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ. ಇನ್ನು ಅಬ್ಬರದ ಪ್ರಚಾರ ನಡೆಸಿದ್ದ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ 1861 ಮತಗಳನ್ನು ಪಡೆದು ಠೇವಣಿಯೂ ಉಳಿಸಿಕೊಳ್ಳಲಾಗದೆ ಮುಖಭಂಗ ಅನುಭವಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ಅವರ ನಿಧನದಿಂದ ಇಲ್ಲಿನ ಚುನಾವಣೆ ಜೂನ್ 11ಕ್ಕೆ ಮುಂದೂಡಿತ್ತು. ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು ಶೇಕಡಾ 55 ಮತದಾನವಾಗಿತ್ತು. ಇಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು.16ನೇ ಸುತ್ತಿನ ಮತ ಎಣಿಕೆಯೂ ಮುಗಿದಿದ್ದು ಭರ್ಜರಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ 54,457 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.