ಮುಖ್ಯಮಂತ್ರಿಯೇ ಬೇಡ ಅಂದ್ರು ಬರ್ತಾರಂತೆ ಇವರು !! ಎಚ್ ಡಿ ಕುಮಾರಸ್ವಾಮಿಗೆ ತಲೆನೋವಾದವರು ಯಾರು ಗೊತ್ತಾ ?

ನೀವಿಷ್ಟು ಜನ ಬರ್ಬೆಡ್ರಿ. ನನಗೇನು ನೀವು ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ರೂ ಈ ಮಂದಿ ಕೇಳ್ತಾ ಇಲ್ಲ. ಸಿಎಂ ಸುತ್ತಾ ಇವರ ಸಂಖ್ಯೆ ಜಾಸ್ತಿಯಾಗ್ತಲೇ ಇದೆ. ಹೀಗಂತ ಕುಮಾರಸ್ವಾಮಿ ಇವತ್ತು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಹೇಳುತ್ತಿದ್ದರು.ನಾನು ಆಡಳಿತದಲ್ಲಿ ವೆಚ್ಚ ತಗ್ಗಿಸಬೇಕು ಎಂದುಕೊಂಡಿದ್ದೇನೆ. ನನಗೆ ಭದ್ರತಾ ಸಿಬ್ಬಂದಿಯನ್ನು ಕಡಿಮೆಗೊಳಿಸಿ ಎಂದು ಹೇಳುತ್ತಿದ್ದೇನೆ. ಅದಕ್ಕೆ ಪೊಲೀಸರು ಒಪ್ಪುತ್ತಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದರು.

ad

ಕಸದ ಸಮಸ್ಯೆ ಬಗೆಹರಿಸಲು ಗಾರ್ಬೇಜ್ ಮಾಫಿಯಾ ಬಿಡುವುದಿಲ್ಲ, ಮರಳು ಮಾಫಿಯ ಮತ್ತು ಕಸದ ಸಮಸ್ಯೆ ಬಗೆ ಹರಿಸಲು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ಸಾಲಮನ್ನಾಗೆ ಬದ್ದ ಎಂದು ಹೇಳಿರುವ ಕುಮಾರ ಸ್ವಾಮಿ ಮೂರು ತಿಂಗಳ ಕಾಲಾವಕಾಶ ನೀಡಿ, ನಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ನಿಮಗೆ ತಿಳಿಯುತ್ತದೆ ಎಂದು ಹೇಳಿದರು.

ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ನಾನು ವಿಶೇಷ ವಿಮಾನದಲ್ಲಿ ಪ್ರಯಾಣಿಸುತ್ತಿಲ್ಲ, ಅದಕ್ಕೆ ಖರ್ಚು ಮಾಡುವ ಹಣವನ್ನು ಯಾವುದಾದೂ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಭದ್ರತೆ ಹಾಗೂ ಬೆಂಗಾವಲು ವಾಹನಗಳ ಸಂಖ್ಯೆ ಕಡಿಮೆ ಮಾಡಿ ಎಂದು ಹೇಳಿದರೆ ಅದಕ್ಕೆ ಅಧಿಕಾರಿಗಳು ಒಪ್ಪುತ್ತಿಲ್ಲ ಎಂದು ಹೇಳಿದ್ದಾರೆ.

ಕೇಂದ್ರದ ಮನವೊಲಿಸಿ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತಿದ್ದೇನೆ, ಒಂದು ಕ್ಷಣವನ್ನು ವ್ಯರ್ಥ ಮಾಡದೆ ರಾಜ್ಯದ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿದ್ದೇನೆ, ಸಾಲ ಮನ್ನಾ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಅದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಅವಶ್ಯಕತೆಯಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಂಬಂಧ ಮಾತನಾಡಿದ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ನ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಉಲ್ಲಂಘಿಸಿಲ್ಲ, ಸುಪ್ರೀಂ ಆದೇಶವನ್ನು ಉಲ್ಲಂಘಿಸುವ ಉದ್ದೇಶ ನಮಗಿಲ್ಲ, ನಿರ್ವಹಣಾ ಮಂಡಳಿ ವೈಜ್ಞಾನಿಕವಾಗಿ ರಚನೆಯಾಗಬೇಕು ಎಂಬುದು ನಮ್ಮ ಆಶಯವಾಗಿದೆ, ಅಂತರರಾಜ್ಯ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ನಿರ್ಧಾರ ಕೈಗೊಳ್ಳುವಾಗ ಸಂಸತ್ ನ ಎರಡೂ ಸದನಗಳಲ್ಲಿ ಚರ್ಚಿಸಿ ನಂತರ ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.