ಭಕ್ತರ ಚಿನ್ನಾಭರಣ ಕದ್ದಿದ್ದ ಕಳ್ಳಿಯರಿಬ್ಬರ ಬಂಧನ

 

ad


ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿರುವ ಸುಪ್ರಸಿದ್ಧ ದತ್ತಾತ್ರೇಯ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಇಬ್ಬರು ಖತರ್ನಾಕ್ ಕಳ್ಳಿಯರನ್ನು ದೇವಲ್ ಗಾಣಗಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ನಂದಾ ಗಾಯಕವಾಡ್, ಮಂಗಳಾ ಜಾಧವ್ ಬಂಧಿತ ಆರೋಪಿಗಳು ಬಂಧಿತರಿಂದ 40 ಗ್ರಾಂ ಹಾಗೂ 30 ಗ್ರಾಂನ ಎರಡು ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.

 

ದತ್ತಾತ್ರೇಯ ದೇವಸ್ಥಾನಕ್ಕೆ ಆಗಮಿಸಿದ ಹೈದರಾಬಾದ್ ಮೂಲದ ಪೋಲ್ ಹಾಗೂ ಗಂಗಾವತಿ ಮೂಲದ ಶಾಂತಾ ವರ್ಣೇಕರ್ ಎಂಬುವವರು ದೇವಸ್ಥಾನದ ಸಂಗಮ ಬಳಿ ಸ್ನಾನಕ್ಕೆಂದು ತೆರಳಿದ್ದಾಗ ಬ್ಯಾಗ್‌ನಲ್ಲಿ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿದ್ದರು. ದೇವಲ್ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ತಮ್ಮ ವಸ್ತುಗಳ ಬಗ್ಗೆ ನಿಗಾವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.