ಕುಂದಗೋಳ ಉಪಚುನಾವಣಾ ಕಣಕ್ಕೆ ಕಾಂಗ್ರೆಸ್​ ಟ್ರಬಲ್​ ಶೂಟರ್​​! ಕುಸುಮಾ ಶಿವಳ್ಳಿಗೆ ಗೆಲುವಿಗೆ ಸಚಿವ ಡಿ.ಕೆ.ಶಿವಕುಮಾರ್ ಪ್ರಚಾರ!!

ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆ ಧಾರವಾಡ ಜಿಲ್ಲೆಯ ಕುಂದಗೋಳ ಅಖಾಡ ಸದ್ಯ ಭರ್ಜರಿಯಾಗಿ ರಂಗೇರುತ್ತಿದೆ. ಇನ್ನೂ ಕುಂದಗೋಳ ಕ್ಷೇತ್ರದ ಉಸ್ತುವಾರಿಯನ್ನು ವಹಿಸಿಕೊಂಡಿರುವ ಸಚಿವ ಡಿಕೆ ಶಿವಕುಮಾರ್​ ಇಂದಿನಿಂದ ಪ್ರಚಾರ ಕಾರ್ಯಕ್ಕೆ ಧುಮುಕಲಿದ್ದಾರೆ.

ad

ಮೇ 19 ರಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿಯವರು ಸ್ಪರ್ಧಿಸುತ್ತಿದ್ದಾರೆ. ಕುಸುಮಾ ಶಿವಳ್ಳಿ ಪರ ಸಚಿವ ಡಿಕೆ ಶಿವಕುಮಾರ್​ ಇಂದಿನಿಂದ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮಾರ್ಚನಲ್ಲಿ  ಸಚಿವ ಸಿ.ಎಸ್.ಶಿವಳ್ಳಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಅವರ ಪತ್ನಿ ಕುಸುಮಾ ಶಿವಳ್ಳಿಯವರಿಗೆ  ಟಿಕೆಟ್​ ನೀಡಲಾಗಿದೆ.  ಹಲವರು ಅಸಮಧಾನ ವ್ಯಕ್ತಪಡಿಸಿರೋದರಿಂದ  ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿಯನ್ನು ಕ್ಷೇತ್ರದಲ್ಲಿ ಗೆಲ್ಲಿಸುವ ಜವಾಬ್ದಾರಿಯನ್ನು  ಕಾಂಗ್ರೆಸ್​ ಟ್ರಬಲ್​ ಶೂಟರ್ ಡಿಕೇಶಿ ವಹಿಸಿಕೊಂಡಿದ್ದಾರೆ. ಈ  ಹಿಂದೆ ಡಿಕೆಶಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಪರವಾಗಿ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದರು.

ಸದ್ಯ ಸಚಿವ ಡಿ.ಕೆ.ಶಿವಕುಮಾರ್ ರವರಿಗೆ ಕುಂದಗೋಳ ಕ್ಷೇತ್ರದಲ್ಲಿನ ಚುನಾವಣಾ ಪ್ರಚಾರದಲ್ಲಿ ಸ್ಥಳೀಯ ನಾಯಕರು ಸಾಥ್​ ನೀಡಲಿದ್ದಾರೆ. ಇನ್ನೂ ಕ್ಷೇತ್ರದಲ್ಲಿ ಕಾಂಗ್ರೆಸ್​ ಶಿವಾನಂದ ಬೆಂತೂರು ಮತ್ತು ಜೆಡಿಎಸ್​ನ ಹಜರತ್​​ ಅಲಿ ಜೋಡಮನಿ ಬಂಡಾಯವಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್​​​ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಿ ಗೆಲುವಿನ ಕಾರ್ಯತಂತ್ರ ರೂಪಿಸಲಿದ್ದಾರೆ.