ಮೇ 12 ಕ್ಕೆ ಚುನಾವಣೆ ! ಮೇ 15 ಕ್ಕೆ ಮತ ಎಣಿಕೆ !! ಚುನಾವಣೆ ಘೋಷಣೆ !! ಚುನಾವಣೆಯ ಕಂಪ್ಲೀಟ್ ಟೈಮ್ ಟೇಬಲ್ ಇಲ್ಲಿದೆ.

2018 Assembly Election Date fixed On May 12.
2018 Assembly Election Date fixed On May 12.

ಕರ್ನಾಟಕ ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿದೆ. ಇಂದು ಬೆಳಗ್ಗೆ ಚುನಾವಣಾ ಆಯೋಗ ನಡೆಸಿದ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಾಗಿದ್ದು ಮೇ ತಿಂಗಳ 15ರಂದು ಮತ ಎಣಿಕೆ ನಡೆಯಲಿದೆ.

ad

ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದಿದ್ದಾರೆ. ಎಪ್ರಿಲ್ 17 ರಂದು ಅಧಿಸೂಚನೆ ಪ್ರಕಟವಾಗಲಿದೆ. ಎಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ, ನಾಮಪತ್ರ ಸಲ್ಲಿಕೆಗೆ ಕಡೇ ದಿನ ಎಪ್ರಿಲ್ 24, ಎಪ್ರಿಲ್ ಎಪ್ರಿಲ್ 25 ಕ್ಕೆ ನಾಮಪತ್ರ ಪರಿಶೀಲನೆ, ಎಪ್ರಿಲ್ 27 ಕ್ಕೆ ನಾಮಪತ್ರ ವಾಪಸ್ ಗೆ ಕಡೇ ದಿನ ಎಂದು ಘೋಷಣೆ ಹೊರಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 4,96. 357 ಕೋಟಿ ಮತದಾರರಿದ್ದಾರೆ

ಒಂದೇ ಒಂದು ಹಂತದ ಮತದಾನ ಇಲ್ಲಿ ನಡೆಯಲಿದ್ದು, 56,000 ಮತಗಟ್ಟೆಗಳಿರಲಿವೆ. ಈ ಬಾರಿ ಇವಿಎಂ ಜತೆ ವಿವಿ ಪ್ಯಾಟ್ (ಮತ ಖಾತರಿ ಯಂತ್ರ) ಇರಲಿದೆ. ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ಸೌಲಭ್ಯವಿರಲಿದೆ.

ಪಕ್ಷಗಳ ಚುನಾವಣಾ ವೆಚ್ಚಕ್ಕೆ ಯಾವುದೇ ಮಿತಿಯಿರುವುದಿಲ್ಲ, ಆದರೆ ಅಭ್ಯರ್ಥಿಯೊಬ್ಬರ ಚುನಾವಣಾ ವೆಚ್ಚ ₹28 ಲಕ್ಷಕ್ಕೆ ಸೀಮಿತಗೊಳಿಸಲಾಗಿದೆ. ಈಗಿರುವ 224 ಸದಸ್ಯರ ಕರ್ನಾಟಕ ವಿಧಾನಸಭೆಯ ಕಾಲಾವಧಿ ಮೇ 28ರಂದು ಅಂತ್ಯಗೊಳ್ಳಲಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆಯೇರಲು ಬಿಜೆಪಿ ಯತ್ನಿಸುತ್ತಿದೆ. ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧರಾಗಿದ್ದರೆ, ಇತ್ತ ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಣಕ್ಕಿಳಿದಿದೆ. ಮತ್ತೊಂದೆಡೆ ಜೆಡಿಎಸ್ ವರಿಷ್ಠ ದೇವೇಗೌಡರ ನೇತೃತ್ವದಲ್ಲಿ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದಾರೆ.