ಮತ್ತೆ ರಾಜ್ಯವನ್ನು ಬೆಚ್ಚಿಬೀಳಿಸಿರುವ ಬಿಜೆಪಿ ಕಾರ್ಯಕರ್ತ ಸಂತೋಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮೌನ ಮುರಿದಿದ್ದು, ಇದೊಂದು ವೈಯಕ್ತಿಕ ಕಾರಣಕ್ಕೆ ನಡೆದ ಹತ್ಯೆ.
ಆದರೇ ಬಿಜೆಪಿ ನಾಯಕರು ಚುನಾವಣೆಗಾಗಿ ರಾಜಕೀಯ ಹೇಳಿಕೆ ನೀಡುವುದನ್ನು ಖಯಾಲಿ ಮಾಡಿಕೊಂಡಿದ್ದಾರೆ ಎಂದು ಗರಹ ಸಚಿವರು ಬಿಜೆಪಿಯನ್ನು ಟೀಕಿಸಿದ್ದಾರೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಸಂತೋಷ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿದೆ. ವಾಸೀಂ ಹಾಗೂ ಸಂತೋಷ ಇಬ್ಬರು ಸ್ನೇಹಿತರು. ಒಂದೇ ರಸ್ತೆಯಲ್ಲಿ ವಾಸವಾಗಿದ್ದವರು. ವೈಯಕ್ತಿಕ ವಿಚಾರದಿಂದ ಇಬ್ಬರ ನಡುವೆ ಗಲಾಟೆ ಆಗಿದೆ. ಬಳಿಕ ವಾಸೀಂ ಸ್ಕ್ರೂಡ್ರೈವ್ನಿಂದ ಸಂತೋಷ ಕಾಲಿಗೆ ಚುಚ್ಚಿದ್ದಾನೆ. ವಾಸೀಂ ಲಾಂಗ್ ,ಮಚ್ಚು ಬಳಕೆ ಮಾಡಿ ಹತ್ಯೆ ಮಾಡಿಲ್ಲ.
ಹಿಂದು ಮುಸ್ಲಿಂ ಗಲಾಟೆಯಾದ್ರೆ ಬಿಜೆಪಿಯವರು ಅದಕ್ಕೆ ರಾಜಕೀಯ ಬಣ್ಣ ಕಟ್ಟುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೇ ಬಿಜೆಪಿಗರನ್ನು ಪ್ರಶ್ನೆ ಮಾಡಿರುವ ರಾಮಲಿಂಗಾ ರೆಡ್ಡಿ, ಮೂಡಿಗೆರೆಯ ಧನ್ಯಶ್ರೀ ಸಾವಿಗೆ ಕಾರಣವಾಗಿದ್ದು, ನಿಮ್ಮ ಪಕ್ಷದ ಮುಖಂಡನಲ್ಲವೇ? ಉಡುಪಿಯ ಪ್ರವೀಣ ಪೂಜಾರಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು, ನಿಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲವೇ ಹೀಗೆ ಹಲವು ಪ್ರಕರಣದಲ್ಲಿ ಬಿಜೆಪಿಯವರು ಭಾಗಿಯಾಗಿಲ್ಲವೇ? ಯಾವುದೇ ಕೊಲೆ ಪ್ರಕರಣವಿರಲಿ ಅಪರಾಧಿಗಳಿಗೆ ಶಿಕ್ಷೆ ನೀಡಲು ನಮ್ಮ ಪೊಲೀಸರು, ಸರ್ಕಾರ ಸಶಕ್ತವಾಗಿದೆ ಎಂದರು. ಒಟ್ಟಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ರಾಮಲಿಂಗಾ ರೆಡ್ಡಿ ಬಿಜೆಪಿ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದಾರೆ.