ಸಬ್ ಕಾ ಸಾತ್ ಸಬ್ಕಾ ವಿಕಾಸ್ ಮತ್ತು ಅಚ್ಛೆ ದಿನ್ ಹೆಸರಲ್ಲಿ ಕೇಂದ್ರದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೀಗ 4 ವರ್ಷದ ಸಂಭ್ರಮ. 2014ರಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಅಧಿಕಾರ ಚುಕ್ಕಾಣಿಯನ್ನು ಹಿಡಿದಿತ್ತು. 4 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿಜೆಪಿ ಸಂಭ್ರಮಾಚರಣೆ ಹಮ್ಮಿಕೊಂಡಿದೆ.
ನಾಲ್ಕು ವರ್ಷಗಳಲ್ಲಿ ಮೋದಿ ಸರ್ಕಾರದ ಸಾಧನೆ ಮತ್ತು ಜನಪ್ರಿಯ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಲು ನಿರ್ಧರಿಸಿದೆ. ಅಲ್ದೆ ಮುಂದಿನ ಲೋಕಸಭೆ ಚುನಾವಣೆ ಪ್ರಚಾರದ ಥೀಮ್ ಸಹ ಅನಾವರಣಗೊಳಿಸಲಿದೆ. ಪ್ರಧಾನಿ ಮೋದಿ ಇಂದು ಒಡಿಶಾ ಪ್ರವಾಸ ಕೈಗೊಳ್ಳಲಿದ್ದು, ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಮಾಡಲಿದ್ದಾರೆ.
4ನೇ ವರ್ಷದ ಸಂಭ್ರಮದಲ್ಲಿ ನಮೋ ಸರ್ಕಾರಕ್ಕೆ ತೈಲಬೆಲೆ ಗಗನಕ್ಕೇರಿರೋದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.