ಮಹಾರಾಷ್ಟ್ರದಲ್ಲೂ ಸಿಎಂ ಸಿದ್ದರಾಮಯ್ಯ ಹವಾ !! ಸಿದ್ದರಾಮಯ್ಯರಂತಹ ಸಿಎಂ ಕಂಡೇ ಇಲ್ವಂತೆ ಮರಾಠಿಗರು !!

 

adಮಹಾರಾಷ್ಟರದಲ್ಲಿ ಈವರೆಗೂ ಬಹಳ ಮುಖ್ಯಮಂತ್ರಿಗಳು ಆಗಿ ಹೋಗಿದ್ದರೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನಂತಹ ಮುಖ್ಯಮಂತ್ರಿಯನ್ನು ಕಂಡೇ ಇಲ್ಲ ಎಂದು ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ಮರಾಠಿ ಭಾಷೆ ಮತ್ತು ಮಹಾರಾಷ್ಟ್ರದ ಸ್ವಾಭಿಮಾನದ ಪ್ರಶ್ನೆಯ ಬಗ್ಗೆ ಮಾತನಾಡುತ್ತಿದ್ದ ರಾಜ್ ಠಾಕ್ರೆ ಕರ್ನಾಟಕ ಸಿಎಂ ಸಿದ್ದರಾಮಯ್ಯರನ್ನು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆದರ್ಶವಾಗಿ ತೆಗೆದುಕೊಳ್ಳಬೇಕು ಎಂದಿದ್ದಾರೆ. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿಯಿಲ್ಲದ ಭಾಷಾ ಪ್ರೇಮ ತೋರಿಸುತ್ತಿದ್ದಾರೆ. ಪರಬಾಷೆಯ ವ್ಯಾಮೋಹಕ್ಕೆ ಒಳಗಾಗದೇ ಕನ್ನಡವನ್ನು ಕಲಿಯಬೇಕು, ಉಳಿಸಬೇಕು ಎಂದು ಕರೆ ಕೊಟ್ಟಿದ್ದಾರೆ. ಕನ್ನಡ ಮತ್ತು ಕನ್ನಡಿಗರ ಪ್ರಶ್ನೆ ಬಂದಾಗ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ರಾಜಿ ಮಾಡಿಕೊಂಡಿಲ್ಲ” ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಕನ್ನಡ ಹೋರಾಟಗಾರರಿಗಿಂತಲೂ ಒಂದು ಹೆಜ್ಜೆ ಮುಂದಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ದ್ವಜಕ್ಕೆ ಮಾನ್ಯತೆ ಕೊಡುವ ನಿರ್ಧಾರಕ್ಕೆ ಬಂದಿದ್ದರು. ಮೆಟ್ರೋದಲ್ಲಿ ಹಿಂದಿ ಹೇರಿಕೆಯಾದಾಗ ತಕ್ಷಣ ಅದಕ್ಕೆ ಪ್ರತಿರೋಧ ಒಡ್ಡಿ ಫಲಕಗಳನ್ನು ಬದಲಿಸಿದ್ದರು. ಅಸೆಂಬ್ಲಿ ನಡೆಯುವ ವೇಳೆ ಶಾಸಕರಿಗೆ ಸಿದ್ದರಾಮಯ್ಯ ಮಾಡಿರುವ ಕನ್ನಡ ಪಾಠ ಭಾರೀ ಸದ್ದು ಮಾಡಿತ್ತು. ಇದೀಗ ಸಿದ್ದರಾಮಯ್ಯ ಕನ್ನಡ ಪ್ರೇಮ ಉಳಿದ ಪ್ರಾದೇಶಿಕ ಭಾಷಾ ಹೋರಾಟಗಾರರಿಗೆ ಸ್ಪೂರ್ತಿಯಾಗಿದೆ. ಉಳಿದ ಮುಖ್ಯಮಂತ್ರಿಗಳು, ಸರಕಾರಗಳು ಸಿದ್ದರಾಮಯ್ಯರನ್ನು ಮಾಧರಿಯಾಗಿಟ್ಟುಕೊಂಡು ಕೆಲಸ ಮಾಡಬೇಕು ಎಂಬ ಆಗ್ರಹಗಳು ಪ್ರಾರಂಭವಾಗಿದೆ.