ಪ್ರಧಾನಿ ಮೋದಿಗೆ ಎಚ್ ಡಿಕೆ ನೀಡಿದ ಗಿಫ್ಟ್ ಏನು ಗೊತ್ತೆ ?

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗ ಕೊಡಗು ಅತಿವೃಷ್ಠಿ ಸಂಬಂಧ ಇಂದು ಪ್ರಧಾನ ಮಂತ್ರಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಖ್ಯಾತ ಪ್ರವಾಸಿ ಲೇಖಕ ಡಾಮ್ ಮೊರೇಸ್ ಅವರು ಬರೆದ “ದಿ ಓಪನ್ ಐಸ್: ಎ ಜರ್ನಿ ಥ್ರೂ ಕರ್ನಾಟಕ” ಎಂಬ ವಿಶಿಷ್ಟ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕರ್ನಾಟಕ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಈ ಪುಸ್ತಕವನ್ನು 1976ರಲ್ಲಿ ಪ್ರಕಟಿಸಿತ್ತು. ಇದರ ಲೇಖಕ ಡಾಮ್ ಮೊರೇಸ್ ಭಾರತದ ಪ್ರತಿಭಾನ್ವಿತ ಕವಿ, ಅಂಕಣಕಾರ ಹಾಗೂ ಪ್ರವಾಸಿ ಲೇಖಕರಾಗಿದ್ದರು. ಕರ್ನಾಟಕದ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಈ ಕೃತಿಗೆ ಅಂತರರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರಕಾರ ಹಾಗೂ ಚಿತ್ರ ಕಲಾವಿದ ಪದ್ಮಭೂಷಣ ಮಾರಿಯೋ ಮಿರಾಂಡ ಅವರು ಚಿತ್ರಗಳನ್ನು ಒದಗಿಸಿದ್ದರು.